9:38 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಲೋಕಸಭೆಯಲ್ಲಿ ಗೆಲುವು: ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವ ಡಾ. ಸುಧಾಕರ್ ಸಹಿತ ಬಿಜೆಪಿಯ ನಾಲ್ವರು ನಾಯಕರಿಗೆ ರಾಜಕೀಯ ಪುನರ್ಜನ್ಮ

04/06/2024, 14:21

ಬೆಂಗಳೂರು(reporterkarnataka.com): ಲೋಕಸಭೆ ಚುನಾವಣೆಯಲ್ಲಿ ಜಯಗಳಿಸುವ ಮೂಲಕ 4 ಮಂದಿ ಬಿಜೆಪಿ ನಾಯಕರಿಗೆ ರಾಜಕೀಯ ಪುನರ್ಜನ್ಮ ದೊರಕಿದೆ.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಮಾಜಿ ಸಚಿವ ಡಾ. ಕೆ. ಸುಧಾಕರ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಗೆಲುವಿನ ಮೂಲಕ ರಾಜಕೀಯ ಪುನರ್ಜನ್ಮ ಸಿಕ್ಕಂತಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆ ಪಕ್ಷಾಂತರ ಮಾಡಿ, ಲೋಕಸಭೆ ಚುನಾವಣೆಯ ವೇಳೆ ಮತ್ತೆ ಬಿಜೆಪಿ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಹಾವೇರಿ ಬಿಜೆಪಿ ಟಿಕೆಟ್ ಇನ್ನೊರ್ವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪಾಲಾದಾಗ ಶೆಟ್ಟರ್ ಮತ್ತೆ ಮುನಿಸಿಕೊಂಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ಹೈಕಮಾಂಡ್ ಶೆಟ್ಟರ್ ಅವರ ಬೀಗರಾದ ಸಂಸದೆ ಮಂಗಳಾ ಅಂಗಡಿ ಅವರಿಗೆ ನೀಡಬೇಕಾದ ಟಿಕೆಟ್ ಅನ್ನು ಜಗದೀಶ ಶೆಟ್ಟರ್ ಅವರಿಗೆ ನೀಡಿತ್ತು. ಇದೀಗ ಶೆಟ್ಟರ್ ಭರ್ಜರಿ ಗೆಲುವು ಕಂಡಿದ್ದಾರೆ. ಹಾಗೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ವಿಧಾನಸಭೆ ಟಿಕೆಟ್ ನಿರಾಕರಿಸಲಾಗಿತ್ತು. ಕಾಗೇರಿ ಅವರ ರಾಜಕೀಯ ಜೀವನ ಕಮರಿ ಹೋಯಿತು ಎಂದು ಎಲ್ಲರೂ ಲೆಕ್ಕಾಚಾರ ಹಾಕಿದರು. ಆದರೆ ತನ್ನ ಮಾತಿನಿಂದಲೇ ಟಿಕೆಟ್ ಕಳೆದುಕೊಂಡ ಸಂಸದ ಅನಂತ ಕುಮಾರ್ ಹೆಗಡೆ ಬದಲಿಗೆ ಕಾಗೇರಿ ಅವರಿಗೆ ಕೊನೆಯ ಕ್ಷಣದಲ್ಲಿ ಬಿಜೆಪಿ ಟಿಕೆಟ್ ನೀಡಿತ್ತು. ಮತದಾರರು ಕೂಡ ಕಾಗೇರಿ ಅವರನ್ನು ಹರಸಿ ಸಂಸತ್ತಿಗೆ ಕಳುಹಿಸಿದ್ದಾರೆ. ಕೊರೊನಾ ಕಾಲದಲ್ಲಿ ಹಗರಣ ನಡೆಸಿದ್ದಾರೆ ಎಂಬ ಆರೋಪಕ್ಕೊಳಗಾಗಿದ್ದ ಮಾಜಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಆದರೆ ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಮತ್ತೆ ಪ್ರವರ್ಧಮಾನಕ್ಕೆ ಬಂದಿದ್ದಾರೆ. ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು ಕೂಡ ಗೆಲುವಿನ ಮೂಲಕ ರಾಜಕೀಯ ಪುನರ್ಜನ್ಮ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು