6:39 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆ: ಬಿಜೆಪಿ ಕಾಗವಾಡ ಮಂಡಲದ ಪದಾಧಿಕಾರಿಗಳ, ಬೂತ್ ಅಧ್ಯಕ್ಷರ ಚುನಾವಣೆ ಪೂರ್ವ ತಯಾರಿ ಸಭೆ

30/03/2024, 16:38

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಕಾಗವಾಡ ಮತಕ್ಷೇತ್ರದ ಕೆಂಪವಾಡ ಗ್ರಾಮದಲ್ಲಿ ಬಿಜೆಪಿ ಕಾಗವಾಡ ಮಂಡಲದ ಪದಾಧಿಕಾರಿಗಳು ಬೂತ್ ಅಧ್ಯಕ್ಷರು, ಬಿಎಲ್‌ಎ – 2 ಗಳ ಸಭೆ‌ ಹಾಗೂ ಚುನಾವಣೆ ಪೂರ್ವತಯಾರಿ ಕುರಿತು ಬಿಜೆಪಿ
ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿ ಸಭೆ ನಡೆಯಿತು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಭಾರತೀಯ ಜನತಾ ಪಕ್ಷದ ಜನಪರ ಆಡಳಿತಕ್ಕೆ ಜನಮನ್ನಣೆ ಈಗಾಗಲೇ ಸಿಕ್ಕಿದ್ದು, ಕರ್ನಾಟಕದಲ್ಲೂ ಈ ಬಾರಿ ಕಮಲ‌ ಪಡೆ ಐತಿಹಾಸಿಕ ಗೆಲುವು ಸಾಧಿಸುವ ವಿಶ್ವಾಸವಿದೆ. ಕೇಂದ್ರ ಸರಕಾರದ ಜನಪರ ಯೋಜನೆಗಳು ಮತ್ತು ನಮ್ಮ ಪಕ್ಷದ ಕಾರ್ಯಕರ್ತರ ಸಂಘಟನಾತ್ಮಕ ಶಕ್ತಿಯೇ ನಮಗೆ ಶ್ರೀರಕ್ಷೆಯಾಗಲಿದೆ ಎಂದು ಅಣ್ಣಾ ಸಾಹೇಬ್ ಜೊಲ್ಲೆ ನುಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಶ್ರೀಮಂತ ಪಾಟೀಲ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಪ್ರಭಾರಿಗಳು ಹಾಗೂ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ, ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ಮಾಜಿ ಜಿಲ್ಲಾಧ್ಯಕ್ಷ ಡಾ.ರಾಜೇಶ ನೇರ್ಲಿ, ಕಾಗವಾಡ ಮಂಡಲದ ಅಧ್ಯಕ್ಷ ತಮ್ಮಣ್ಣಾ ಪಾರಶೆಟ್ಟಿ, ವಿಭಾಗಿಯ ಪ್ರಭಾರಿಗಳಾದ ಚಂದ್ರಶೇಖರ ಕವಟಗಿ, ಮಂಡಲ ಉಸ್ತುವಾರಿಗಳಾದ ಅಮೃತ ಕುಲಕರ್ಣಿ, ಚಿಕ್ಕೋಡಿ ಜಿಲ್ಲಾ ಪ್ರಭಾರಿಗಳಾದ ಉಜ್ವಲಾ ಬಡವನಾಚೆ, ಅಭಯ ಅರೊಕೆ ವಕೀಲರು,‌ಕಾಗವಾಡ ಬಿಜೆಪಿ ಮುಖಂಡರಾದ ಶಿವಾನಂದ ಪಾಟೀಲ ನಿಂಗಪ್ಪಾ ಖೋಕಲೆ ವಕೀಲರು, ಪ್ರಭಾಕರ ಚವ್ಹಾಣ, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು‌.

ಇತ್ತೀಚಿನ ಸುದ್ದಿ

ಜಾಹೀರಾತು