7:34 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಲಂಡನಿನ ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಕರಾಟೆ ಚಾಂಪಿಯನ್ ಶಿಪ್: ಅರುಣ್ ಮಾಚಯ್ಯ ಆಯ್ಕೆ

25/06/2022, 09:13

ಮಡಿಕೇರಿ(reporterkarnataka.com):
ಲಂಡನಿನ ಬರ್ಮಿಂಗ್ಹ್ಯಾಮ್ ನಲ್ಲಿ ಮುಂದಿನ ಸೆಪ್ಟೆಂಬರ್ 26ರಿಂದ ನಡೆಯಲಿರುವ ಕಾಮನ್ವೆಲ್ತ್ ಕರಾಟೆ ಚಾಂಪಿಯನ್ ಶಿಪ್ ಗೆ ಭಾರತ ತಂಡವನ್ನು ಪ್ರತಿನಿಧಿಸಲು ಹಿರಿಯ ಕರಾಟೆಪಟು ಮತ್ತು ಮಾಜಿ ಶಾಸಕ ಸಿ. ಎಸ್. ಅರುಣ್ ಮಾಚಯ್ಯ ಆಯ್ಕೆಗೊಂಡಿದ್ದಾರೆ.

ದಕ್ಷಿಣ ಭಾರತ ಕರಾಟೆ ಫೆಡರೇಷನ್ ಅಧ್ಯಕ್ಷರು, ಕರಾಟೆ ಇಂಡಿಯಾ ಆರ್ಗನೈಜೇಷನ್ ಹಿರಿಯ ಉಪಾಧ್ಯಕ್ಷರು ಹಾಗೂ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಸಿ.ಎಸ್. ಅರುಣ್ ಮಾಚಯ್ಯ ಅವರು ಈ ಹಿಂದೆ ವಿಶ್ವದ ಹಲವೆಡೆ ನಡೆದ ಹಲವಾರು ಅಂತರರಾಷ್ಟ್ರೀಯ ಚಾಂಪಿಯನ್ಶಿಪ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ.

ಇತ್ತೀಚಿಗೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ ಸಮಾರಂಭದಲ್ಲಿ ಕಾಮನ್ವೆಲ್ತ್ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿರುವ ಅರುಣ್ ಮಾಚಯ್ಯ ಅವರನ್ನು ಅಭಿನಂದಿಸಿ ಬೀಳ್ಕೊಡಲಾಯಿತು.

ಅರುಣ್ ಮಾಚಯ್ಯ ಅವರನ್ನು ಅಭಿನಂದಿಸಿದ ಸಂದರ್ಭದಲ್ಲಿ ಕರಾಟೆ ಇಂಡಿಯಾ ಆರ್ಗನೈಸೇಶನ್ ಅಧ್ಯಕ್ಷರಾದ ಸಂಜೀವ್ ಕುಮಾರ್ ಜಾಗ್ರ, ವಿಶ್ವ ಕರಾಟೆ ಮಂಡಳಿಯ ತಾಂತ್ರಿಕ ಆಯೋಗದ ಸದಸ್ಯ ಭರತ್ ಶರ್ಮ, ಮಹಾರಾಷ್ಟ್ರ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಸಲಾಹುದ್ದೀನ್ ಅನ್ಸಾರಿ, ಮಹಾರಾಷ್ಟ್ರ ಕರಾಟೆ ಅಸೋಸಿಯೇಷನ್ ಕಾರ್ಯದರ್ಶಿ ಸಂದೀಪ್ ಘಾಡೆ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು