ಇತ್ತೀಚಿನ ಸುದ್ದಿ
ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ
09/01/2026, 18:21
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಒಣಗಿದ್ದ ಸಿಪ್ಪೆಯನ್ನು ಸಾಗಿಸುತ್ತಿದ್ದ ಲಾರಿಯೊಂದು ಬೆಂಕಿಗೆ ಅಹುತಿಯಾಗಿದೆ. ಮೈಸೂರುನಿಂದ ಮಂಗಳೂರಿಗೆ ತೆರಳುತ್ತಿದ್ದ ಹೋಗುತ್ತಿದ್ದ ಲಾರಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ದೇವರಕೊಲ್ಲಿ ಬಳಿ ಇಂದು ಬೆಳ್ಳಿಗೆ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಮಡಿಕೇರಿ ಅಗ್ನಿಶಾಮಕ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಸದ್ಯ
ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಪೊಲೀಸ್ ಮೂಲ ತಿಳಿಸಿದ್ದು, ಅನಾಹುತಕ್ಕೆ ತನಿಖೆ ನಡೆಯುತ್ತಿದೆ.












