ಇತ್ತೀಚಿನ ಸುದ್ದಿ
ಲಾರಿ- ಕಾರು ಮುಖಾಮುಖಿ ಡಿಕ್ಕಿ: ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರು
29/05/2022, 16:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರಿನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕಾರಿಗೆ ಕಾರ್ಕಳ ಕಡೆಯಿಂದ ಚಿಕ್ಕಮಗಳೂರುಗೆ ತೆರಳುತ್ತಿದ್ದ ತರಕಾರಿ ಲಾರಿ ಡಿಕ್ಕಿ ಹೊಡೆದಿದೆ. ಇದು ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಾಗಿದ್ದು, ಇತ್ತೀಚಿಗೆ ಅಗಲೀಕರಣ ಮಾಡಲಾಗಿದೆ. ವಾಹನ ಸವಾರರು ಮನಸ್ಸಿಗೆ ಬಂದ ಹಾಗೆ ಸಂಚಾರ ಮಾಡುವುದರಿಂದ ಈ ರೀತಿ ಅಪಘಾತಗಳು ಆಗಾಗ ನಡೆಯುತ್ತಲೇ ಇದೆ ಅಂತ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ