6:49 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಹುಬ್ಬಳ್ಳಿಯ ಅಗಸದಲ್ಲಿ ಯುದ್ಧ ವಿಮಾನಗಳ ಭಾರೀ ಘರ್ಜನೆ: ಆತಂಕಗೊಂಡ ಜನತೆ

26/03/2026, 10:37

ಹುಬ್ಬಳ್ಳಿ(reporterkarnataka.com): ಹುಬ್ಬಳ್ಳಿ ನಗರದಲ್ಲಿ ಅಚಾನಕ್ಕಾಗಿ ಅಗಸದಲ್ಲಿ ಕಾಣಿಸಿಕೊಂಡ ಮೂರು ಯುದ್ಧ ವಿಮಾನಗಳು ಕೆಲಕಾಲ ಜನರಲ್ಲಿ ಆತಂಕ ಸೃಷ್ಟಿಸಿದವು.
ಮಾರ್ಚ್ 25 ರ ಸಂಜೆ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿದ ಈ ವಿಮಾನಗಳನ್ನು ನೋಡಿದ ಜನರು, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆ ಗಾಬರಿಗೊಂಡರು. ಕೆಲ ಹೊತ್ತು ಹುಬ್ಬಳ್ಳಿ ನಗರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದರೂ, ನಂತರ ಇದು ಕೇವಲ ಪ್ರಾಯೋಗಿಕ ಹಾರಾಟ ಎಂಬುದು ಸ್ಪಷ್ಟವಾಗಿದೆ.
ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶ್ ಕುಮಾರ್ ಅವರು ನೀಡಿದ ಮಾಹಿತಿಯಂತೆ, ಈ ಮೂರು ಯುದ್ಧ ವಿಮಾನಗಳು ಗೋವಾ ವಿಮಾನ ನಿಲ್ದಾಣದಿಂದ ಟೇಕ್‌ಆಫ್ ಆಗಿ, ನಿಯಮಿತವಾಗಿ ನಡೆಯುವ ತರಬೇತಿ ಹಾರಾಟದ ಭಾಗವಾಗಿ ಹುಬ್ಬಳ್ಳಿ ಆಕಾಶದಲ್ಲಿ ಸಂಚರಿಸಿದ್ದವು. ಇಂತಹ ಪ್ರಾಯೋಗಿಕ ಹಾರಾಟಗಳು ಸಾಮಾನ್ಯವಾಗಿ ಎರಡು ತಿಂಗಳಿಗೆ ಒಮ್ಮೆ ನಡೆಯುತ್ತವೆ. ಜನರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು