ಇತ್ತೀಚಿನ ಸುದ್ದಿ
Love- Sex- Dhokha | ಸಿಐಎಸ್‌ಎಫ್ ಮಹಿಳಾ ಅಧಿಕಾರಿ ವಿರುದ್ಧ ವಂಚನೆ ಆರೋಪ: ಸಂತ್ರಸ್ತ ನಡುವಯಸ್ಕ ಸಾವಿಗೆ ಶರಣು
04/03/2025, 10:20

ಅನುಷ್ ಪಂಡಿತ್ ಮಂಗಳೂರು
info.reporterkarnataka@gmail.com
ಸಾಮಾನ್ಯವಾಗಿ ಗಂಡಸರು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸುಖ ಪಡೆದು ಹೆಣ್ಣು ಮಕ್ಕಳನ್ನು ವಂಚಿಸಿದ ಪ್ರಕರಣಗಳನ್ನು ನಾವು ಆಗಾಗ ಕೇಳ್ತಾ ಇರುತ್ತೇವೆ. ಆದರೆ ಇಲ್ಲೊಂದು ಉಲ್ಟಾ ಪ್ರಕರಣ ನಡೆದಿದೆ. ಇಲ್ಲಿ ಅಧಿಕಾರಿ ಮಹಿಳೆಯೊಬ್ಬಳು ಪುರುಷನನ್ನು ನಂಬಿಸಿ ಮೋಸ ಮಾಡಿದ ಬಗ್ಗೆ ಆರೋಪ ಕೇಳಿ ಬಂದಿದೆ. ವಂಚನೆಗೊಳಗಾದ ವ್ಯಕ್ತಿ ಎನ್ನಲಾದ ನಡು ವಯಸ್ಕ ಆತ್ಮಹತ್ಯೆ ಕೂಡ ಮಾಡಿದ್ದಾರೆ.
ಸಿಐಎಸ್‌ಎಫ್ (ಕೇಂದ್ರೀಯ ಕೈಗಾರಿಕಾ ರಕ್ಷಣಾ ಪಡೆ)ನ ಮಹಿಳಾ ಅಧಿಕಾರಿಯಾಗಿರುವ ಮಹಿಳೆ ತನ್ನನ್ನು ಪ್ರೀತಿಸಿ ದೈಹಿಕ ಸಂಬಂಧ ಬೆಳೆಸಿ ಮೋಸ ಮಾಡಿದ್ದಾಳೆಂದು ಆರೋಪಿಸಿ ಉತ್ತರ ಪ್ರದೇಶ ಮೂಲದ ಅಭಿಷೇಕ್ ಸಿಂಗ್ (40) ಎಂಬವರು ನಗರದ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ.
ಚೆನ್ನೈಯಲ್ಲಿ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ
ಉತ್ತರ ಪ್ರದೇಶದ ಗಾಜಿಪುರ ನಿವಾಸಿ, ಅಭಿಷೇಕ್ ಸಿಂಗ್ ಈ ಕುರಿತು ಸಿಐಎಸ್‌ಎಫ್ ನ ಮಹಿಳಾ ಅಧಿಕಾರಿ ವಿರುದ್ಧ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಸಾಯುವ ಮುನ್ನ ಈ ಕುರಿತು ವೀಡಿಯೋ ಕೂಡ ಮಾಡಿದ್ದಾರೆ. 20 ನಿಮಿಷಗಳ ಸುದೀರ್ಘ ಈ ವೀಡಿಯೊದಲ್ಲಿ ತನ್ನನ್ನು ವಂಚಿಸಿದ ಮಹಿಳಾ ಅಧಿಕಾರಿ ಹೆಸರು, ಹುದ್ದೆಯನ್ನು ವಿವರಿಸಿದ್ದಾರೆ. ಇದನ್ನು ಇನ್ ಸ್ಟಾ ಗ್ರಾಮಿನಲ್ಲಿ ಅಪ್ಲೋಡ್ ಕೂಡ ಮಾಡಿದ್ದಾರೆ.
ಅಭಿಷೇಕ್ ಸಿಂಗ್ ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿರುವ ವಿಡಿಯೋದಲ್ಲಿ ಮೋನಿಕಾ ಸಿಹಾಗ್ ಅವರು ತಮ್ಮನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೋನಿಕಾ ಸಿಹಾಗ್ ಈಗಾಗಲೇ ವಿವಾಹಿತೆಯಾಗಿದ್ದು, ಆ ವಿಷಯವನ್ನು ಮುಚ್ಚಿಟ್ಟು ತನ್ನ ಜೊತೆ ಸಂಬಂಧ ಬೆಳೆಸಿದ್ದರು. ಪ್ರೀತಿಯ ನೆಪದಲ್ಲಿ ತನಗೆ ಮೋಸ ಮಾಡಿದ್ದಾಳೆ. ತನ್ನಿಂದ ದೈಹಿಕ ಸುಖ, ಆರ್ಥಿಕ ಲಾಭ ಪಡೆದು ಮೋಸ ಮಾಡಿದ್ದಾಳೆ. ಆಕೆ ಹಲವರ ಜೊತೆಗೆ ಇದೇ ರೀತಿಯ ಸಂಬಂಧ ಇಟ್ಟುಕೊಂಡಿರುವುದು ತಿಳಿದು ಬಂದಿದೆ. ಮೋನಿಕಾಗೆ 8 ಲಕ್ಷದಷ್ಟು ಮೌಲ್ಯದ ಚಿನ್ನಾಭರಣ ತೆಗೆದುಕೊಟ್ಟಿದ್ದೇನೆ ಎಂದು ವಿಡಿಯೋದಲ್ಲಿ ಆರೋಪಿಸಿದ್ದಾರೆ. ಮೋನಿಕಾ ಸಿಂಗ್, ಗುಜರಾತಿನ ಅಹ್ಮದಾಬಾದ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಳೆ ಎಂದು ಅಭಿಷೇಕ್ ಹೇಳಿಕೊಂಡಿದ್ದಾರೆ. ಪಾಂಡೇಶ್ವರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.