9:49 PM Friday2 - January 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ… ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ…

ಇತ್ತೀಚಿನ ಸುದ್ದಿ

ಲವ್, ಸೆಕ್ಸ್, ದೋಖಾ ಪ್ರಕರಣ | ಆರೋಪಿ ಕೃಷ್ಣ ರಾವ್ ಜಾಮೀನು ರದ್ದುಗೊಳಿಸಲು ಅರ್ಜಿ: ಪ್ರತಿಭಾ ಕುಳಾಯಿ

02/01/2026, 21:42

ಮಂಗಳೂರು(reporterkarnataka.com) ಸಂಧಾನದ ಬಾಗಿಲು ಮುಚ್ಚಿರುವುದರಿಂದ ಪುತ್ತೂರಿನ ಯುವತಿಗೆ ಮಗು ಕರುಣಿಸಿ ಮದುವೆಗೆ ನಿರಾಕರಿಸುತ್ತಿರುವ ಆರೋಪಿ ಕೃಷ್ಣ ಜೆ.ರಾವ್‌ಗೆ ಕೋರ್ಟ್‌ನಿಂದ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಲು ಅರ್ಜಿ ಸಲ್ಲಿಸಲಾಗುವುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ ಹೇಳಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಅನ್ಯಾಯಕ್ಕೊಳಗಾದ ಯುವತಿ, ಮಗು ಹಾಗೂ ಯುವತಿಯ ಪೋಷಕರ ಜತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಧಾನದ ಬಾಗಿಲು ಮುಚ್ಚಿರುವುದರಿಂದ ಜ. 24ರಂದು ಕಲ್ಲಡ್ಕದಲ್ಲಿ ಪ್ರತಿಭಟನಾರ್ಥವಾಗಿ ಮಗುವಿಗೆ ನಾಮಕರಣ ಶಾಸ್ತ್ರ ನಡೆಸುವುದಾಗಿ ಹೇಳಿದರು.
ಡಿಎನ್‌ಎ ಪರೀಕ್ಷೆಯಲ್ಲಿ ಸಂತ್ರಸ್ತೆ ಪೂಜಾಳ ಮಗುವಿನ ತಂದೆ ಕೃಷ್ಣ ಜೆ.ರಾವ್ ಎಂಬುದು ಸಾಬೀತಾದರೂ ಆತ ಈಕೆಯನ್ನು ಮದುವೆಯಾಗಲು ಒಪ್ಪುತ್ತಿಲ್ಲ. ಬದಲಾಗಿ 50 ಲಕ್ಷ ರೂ.ಗಳ ಪರಿಹಾರ ನೀಡಿ ಸಂಧಾನ ಮಾತುಕತೆಗೆ ಮುಂದಾಗಿದ್ದಾರೆ. ಇದಕ್ಕೆ ಯುವತಿಯಾಗಲಿ ಆಕೆಯ ಕುಟುಂಬವಾಗಲಿ ಒಪ್ಪುವುದಿಲ್ಲ. ಅವರಿಗೆ ಬೆಂಬಲವಾಗಿ ಸಮಾಜದ ಎಲ್ಲ ವರ್ಗದ ಜನ ಅವರ ಜತೆಗಿದ್ದಾರೆ. ಕೃಷ್ಣ ಜೆ. ರಾವ್ ಯುವತಿ ಜತೆ ವಿವಾಹವಾಗಿ ಆ ಮಗುವಿಗೆ ತಂದೆಯ ಸ್ಥಾನಮಾನ ನೀಡುವ ಆಶಾಭಾವನೆಯೊಂದಿಗೆ ಆತನಿಗೆ ಜಾಮೀನು ದೊರಕಿ ಆತ ಆರಾಮವಾಗಿ ಓಡಾಡಿಕೊಂಡಿದ್ದರೂ, ನಾವು ಈವರೆಗೆ ಸುಮ್ಮನಿದ್ದೆವು. ಆತನ ತಾಯಿ ನನ್ನ ಮೇಲೆ ಹಾಗೂ ಯುವತಿಯ ತಾಯಿ ಮೇಲೆ ಮಾನ ಹರಾಜು ಪ್ರಕರಣ ದಾಖಲಿಸಿದ್ದಾರೆ. ಆದರೆ ವಾಸ್ತವದಲ್ಲಿ ಇಲ್ಲಿ ಓರ್ವ ಯುವತಿ ಮತ್ತು ಆಕೆಯ ಕಟುಂಬದವರ ಮಾನ ಹರಾಜು ಹಾಕಲಾಗಿದೆ ಎಂದವರು ಹೇಳಿದರು.
ಕರಾವಳಿಯಲ್ಲಿ ಹಿಂದು ಸಮಾಜದ ಬಗ್ಗೆ ಮುಖಂಡರು, ರಾಜಕೀಯ ನೇತಾರರು ಒಗ್ಗಟ್ಟಿನ ಬಗ್ಗೆ ಮಾತನಾಡುತ್ತಾರೆಯೇ ವಿನಃ ಇಂತಹ ಸನ್ನಿವೇಶದಲ್ಲಿ ಸಿಲುಕಿದವರನ್ನು ಪಾರು ಮಾಡುವ ಬಗ್ಗೆ ನೆರವಿಗೆ ಧಾವಿಸುತ್ತಿಲ್ಲ. ಹಾಗಾಗಿ ನಾವು ಬೇರೆ ಸಮುದಾಯದವರನ್ನೂ ಧ್ವನಿ ಎತ್ತಲು ಆಹ್ವಾನಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ರಾಜಕೀಯ ಹಾಗೂ ಸಂಘಟನಾತ್ಮಕವಾಗಿ ಶಕ್ತಿ ಕೇಂದ್ರ ಆಗಿರುವ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ಊರಿನಿಂದಲೇ ಹೋರಾಟ ಆರಂಭಿಸುತ್ತಿದ್ದೇನೆ. ಇದೇ ಕಾರಣಕ್ಕೆ ಜ.24 ರಂದು ಕಲ್ಲಡ್ಕದಲ್ಲೇ ಮಗುವಿಗೆ ನಾಮಕರಣ ಶಾಸ್ತ್ರ ನೆರವೇರಿಸುವುದಾಗಿ ಪ್ರತಿಭಾ ಕುಳಾಯಿ ಹೇಳಿದರು.
ಮಗುವಿನ ತಂದೆ ಕೃಷ್ಣ ಜೆ.ರಾವ್ ಯಾವ ಕಾರಣಕ್ಕೆ ಪೂಜಾಳನ್ನು ತಿರಸ್ಕರಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ. ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಸಿ ಅರ್ಥಮಾಡಿಕೊಂಡಿದ್ದ ಇವರಿಬ್ಬರ ಸರಸದಲ್ಲಿ ಮಗು ಜನಿಸಿದ ಬಳಿಕ ಮತ್ತೆ ಆಕೆಯನ್ನು ದೂರ ಮಾಡುವುದರಲ್ಲಿ ಅರ್ಥ ಇಲ್ಲ. ಆಕೆ ಯಾವುದೇ ಕಾರಣಕ್ಕೂ ಅಬಲೆ ಅಲ್ಲ, ಆಕೆಯೂ ನಿತ್ಯವೂ ನೊಂದುಕೊಳ್ಳುತ್ತಿದ್ದು, ಆತ್ಮಹತ್ಯೆಗೂ ಯೋಚಿಸಿದ್ದಾಳೆ. ಅವಳ ಬದುಕಿಗೆ ನಾವೆಲ್ಲ ಬೆಂಬಲವಾಗಿ ನಿಲ್ಲುತ್ತಿದ್ದು, ಮುಂದೆ ಕೋರ್ಟ್ ತೀರ್ಮಾನಕ್ಕೆ ಬದ್ಧವಾಗಿ ಮುಂದುವರಿಯುತ್ತೇವೆ ಎಂದು ಪ್ರತಿಭಾ ಕುಳಾಯಿ ನುಡಿದರು.
ಪುತ್ತೂರಿನ ಅರುಣ್ ಕುಮಾರ್ ಪುತ್ತಿಲರ ಬಗ್ಗೆ ನನಗೆ ತುಂಬಾ ಗೌರವ ಇದೆ. ಅವರು ಶ್ರೀನಿವಾಸ ದೇವರಿಗೆ ಕಲ್ಯಾಣ ಅದ್ದೂರಿಯಾಗಿ ನೆರವೇರಿಸಿದ್ದಾರೆ. ಶ್ರೀನಿವಾಸ ದೇವರಿಗೆ ಯಾವಾಗಲೋ ಕಲ್ಯಾಣ ಆಗಿದೆ. ಈಗ ಆಗಬೇಕಾಗಿರುವುದು ಪೂಜಾಳಿಗೆ. ಅವಳಿಗೆ ಕೃಷ್ಣ ಜೆ.ರಾವ್ ಜೊತೆ ಕಲ್ಯಾಣ ಮಾಡಿಸುವ ಬಗ್ಗೆ ಪುತ್ತಿಲ ಮನಸ್ಸು ಮಾಡಲಿ. ಮದುವೆ ವಿಚಾರದಲ್ಲಿ ಸಂಧಾನ ಮಾತುಕತೆ ವೇಳೆ ಆತನ ಪೋಷಕರು ಈಡೇರಿಸಲಾಗದ ಷರತ್ತು ಇಟ್ಟಿದ್ದಾರೆ. ಮಗುವನ್ನು ಸಾಂತ್ವನ ಕೇಂದ್ರಕ್ಕೆ ಸೇರಿಸಬೇಕು. ಹಾಗಾದರೆ ಮಾತ್ರ ಪೂಜಾಳವನ್ನು ಆತ ವಿವಾಹವಾಗಿ ವಿಚ್ಛೇದನ ನೀಡಲಾಗುವುದು. ಅಲ್ಲದೆ ಈ ವೇಳೆ 50 ಲಕ್ಷ ರೂ. ಪರಿಹಾರ ನೀಡಲಾಗುವುದು. ಇದಕ್ಕಾಗಿ ಮೊದಲು ಆತನ ವಿರುದ್ಧದ ಎಲ್ಲಾ ಪ್ರಕರಣವನ್ನು ವಾಪಸ್ ಪಡೆಯಬೇಕು ಎಂದೆಲ್ಲಾ ಷರತ್ತುಗಳನ್ನು ವಿಧಿಸಲಾಗಿದೆ. ನಮಗೆ ಹಣ ಬೇಡ, ಸಾಮಾಜಿಕ ನ್ಯಾಯ ಬೇಕು. ಆತ ಪೂಜಾಳನ್ನು ವಿವಾಹವಾಗಿ ಮನೆ ಅಳಿಯನಾದರೆ ನಾನೇ ಅವರಿಗೆ 50 ಲಕ್ಷ ರೂ. ಕೊಡುತ್ತೇನೆ ಎಂದು ಪ್ರತಿಭಾ ಕುಳಾಯಿ ಸವಾಲು ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು