11:35 AM Monday16 - November 2026
ಬ್ರೇಕಿಂಗ್ ನ್ಯೂಸ್
ಸಚಿವ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಹೈಕಮಾಂಡ್ ತೀರ್ಮಾನಿಸಲಿದೆ: ಸಿಎಂ ಡಿ. ಕೆ. ಶಿವಕುಮಾರ್ ತಿಪಟೂರು | ಕೆಎಸ್​ಆರ್​ಟಿಸಿ ಬಸ್ ರೂಪದಲ್ಲಿ ಬಂದ ಮೃತ್ಯು: ಭೀಕರ ಅಪಘಾತದಲ್ಲಿ ಯುವಕರಿಬ್ಬರು… ಮಂಡ್ಯ | ನಂದಿನಿ ಮೊಸರಿನ ಪ್ಯಾಕೆಟ್‌ನಲ್ಲಿ ಜಿಯೋ ಸಿಮ್ ಸಿಕ್ಕಿದೆ ಎಂದು ಸುಳ್ಳು… ತುಮಕೂರು | ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ವೇದಿಕೆ ಮೇಲೆಯೇ ಭಾವುಕರಾದ ಡಾ. ಪರಮೇಶ್ವರ್ ಪಂಡಿತ್ ಜವಾಹರಲಾಲ್ ನೆಹರು 137ನೇ ಜನ್ಮದಿನ: ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್… ಮೆಟ್ರೋ ಅನುದಾನ ತಾರತಮ್ಯ ಆರೋಪಕ್ಕೆ ಪ್ರಧಾನಿ ನಯವಾದ ತಿರುಗೇಟು: ಈಗ ಸೆಂಚುರಿ ಬಾರಿಸಿದೆ… ಚಿಕ್ಕಮಗಳೂರು | ತರೀಕೆರೆ‌ ಬಳಿ ಮಣ್ಣಿನಗುಡ್ಡೆಗೆ ಬೈಕ್ ಡಿಕ್ಕಿ: ಪುತ್ರಿ ಸಾವು; ತಂದೆ… ಎಚ್​.ಡಿ.ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು: ಪಿಎ ವಾಟ್ಸಪ್​ ಚಾಟ್​ ಬಗ್ಗೆ ಡಿಸಿ… ಮುಖ್ಯಮಂತ್ರಿ ಡಿಕೆಶಿ ಹಾಸನಾಂಬೆ ದರ್ಶನ ಪಡೆಯುತ್ತಿರುವ ವೀಡಿಯೋಗೆ ಭಕ್ತರಿಂದ ಚಪ್ಪಲಿ ಎಸೆತ: ಸರತಿ… ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ…

ಇತ್ತೀಚಿನ ಸುದ್ದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಚಂಡಮಾರುತದ ಸ್ವರೂಪ ಪಡೆಯುವ ಸಾಧ್ಯತೆ

16/11/2026, 11:28

ನವದೆಹಲಿ(reporterkarnataka.com): ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ನವೆಂಬರ್ 17ರ ವೇಳೆಗೆ ತೀವ್ರ ಚಂಡಮಾರುತದ ಸ್ವರೂಪ ಪಡೆಯುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.
ವಾಯುಭಾರ ಕುಸಿತವು ನವೆಂಬರ್ 16ರ ಸಂಜೆ ವೇಳೆಗೆ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದ್ದು, ನವೆಂಬರ್ 17ರ ವೇಳೆಗೆ ತೀವ್ರ ಚಂಡಮಾರುತದ ಸ್ವರೂಪ ಪಡೆಯಬಹುದು ಎಂದು ಮುನ್ಸೂಚನೆ ನೀಡಲಾಗಿದೆ.
ವಾಯುಭಾರ ಕುಸಿತವು ಉತ್ತರ-ವಾಯವ್ಯ ದಿಕ್ಕಿನಲ್ಲಿ ಚಲಿಸುತ್ತಿದ್ದು, ಬಳಿಕ ವಾಯವ್ಯ ದಿಕ್ಕಿಗೆ ತಿರುಗಿ ಆಂಧ್ರಪ್ರದೇಶದ ಕರಾವಳಿಯತ್ತ ಸಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಐಎಂಡಿ ಬಿಡುಗಡೆ ಮಾಡಿರುವ ಇತ್ತೀಚಿನ ಬುಲೆಟಿನ್ ಪ್ರಕಾರ, ನವೆಂಬರ್ 15ರ ಸಂಜೆ 5.30ರ ವೇಳೆಗೆ ಆಗ್ನೇಯ ಮತ್ತು ಅದಕ್ಕೆ ಹೊಂದಿಕೊಂಡ ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಕೇಂದ್ರಿತವಾಗಿತ್ತು. ಕಳೆದ ಆರು ಗಂಟೆಗಳಲ್ಲಿ ಗಂಟೆಗೆ 7 ಕಿ.ಮೀ ವೇಗದಲ್ಲಿ ಉತ್ತರ-ವಾಯವ್ಯ ದಿಕ್ಕಿನಲ್ಲಿ ಚಲಿಸಿದೆ. ಇದು ಚೆನ್ನೈನಿಂದ ಸುಮಾರು 780 ಕಿ.ಮೀ ಪೂರ್ವ-ಆಗ್ನೇಯಕ್ಕೆ, ವಿಶಾಖಪಟ್ಟಣದಿಂದ 920 ಕಿ.ಮೀ ದಕ್ಷಿಣ-ಆಗ್ನೇಯಕ್ಕೆ ಹಾಗೂ ಒಡಿಶಾದ ಗೋಪಾಲ್‌ಪುರದಿಂದ 1,030 ಕಿ.ಮೀ ದಕ್ಷಿಣ-ಆಗ್ನೇಯಕ್ಕೆ ಇತ್ತು.
ಶ್ರೀಲಂಕಾದ ತ್ರಿಂಕೋಮಲಿಯಿಂದ ಸುಮಾರು 630 ಕಿ.ಮೀ ಪೂರ್ವ-ಈಶಾನ್ಯಕ್ಕೆ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಶ್ರೀ ವಿಜಯಪುರಂನಿಂದ 670 ಕಿ.ಮೀ ಪಶ್ಚಿಮ-ನೈಋತ್ಯಕ್ಕೆ ಈ ವಾಯುಭಾರ ಕುಸಿತವಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು