5:31 PM Thursday24 - September 2026
ಬ್ರೇಕಿಂಗ್ ನ್ಯೂಸ್
ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ

ಇತ್ತೀಚಿನ ಸುದ್ದಿ

ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ

24/09/2026, 17:22

ಬೆಂಗಳೂರು(reporterkarnataka.com): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಮಂಗಳೂರು ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಮಳೆಯಾಗುತ್ತಿದ್ದು, ಶನಿವಾರದ ವರೆಗೆ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ.
ಕರಾವಳಿಯ ದ.ಕ., ಕಾಸರಗೋಡು ಜಿಲ್ಲೆಗಳಲ್ಲಿ ಮಳೆ ಬಹುತೇಕ ಕಡಿಮೆ ಆಗಿತ್ತು. ಉ.ಕ.ದ ಅಂಕೋಲಾ ಕಾರವಾರ ಹೊನ್ನಾವರ ಕುಮಟಾ ಭಟ್ಕಳ ಸಿದ್ದಾಪುರ ತಾಲ್ಲೂಕುಗಳಲ್ಲಿ ಮತ್ತು ಉಡುಪಿ ಜಿಲ್ಲೆಯ ಬೈಂದೂರು ಕುಂದಾಪುರ ತಾಲ್ಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. ಆದರೆ, ಇದೀಗ ದ.ಕ. ಜಿಲ್ಲೆಯಲ್ಲಿ ಮಳೆ ಶುರುವಾಗಿದೆ.
ಶಿವಮೊಗ್ಗದ ತೀರ್ಥಹಳ್ಳಿ, ಹೊಸನಗರ ಸಾಗರ ತಾಲ್ಲೂಕುಗಳ ಅಲ್ಲಲ್ಲಿ ಸಾಧಾರಣ ಮಳೆಯಾಗಿದ್ದು, ಬೆಳಗಾವಿ ಧಾರವಾಡ ಬಾಗಲಕೋಟೆ ಬಿಜಾಪುರ ರಾಯಚೂರು ಬಳ್ಳಾರಿ ಜಿಲ್ಲೆಗಳ ಹಲವೆಡೆ ಉತ್ತಮ ಮಳೆಯಾಗಿದ್ದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಕಡಿಮೆ ಆಗಿತ್ತು.
ಇವತ್ತಿನ ಮುನ್ಸೂಚನೆ ಪ್ರಕಾರ ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರಂಭ ಆಗಲಿದೆ. ಎಲ್ಲಾ ಜಿಲ್ಲೆಗಳಲ್ಲಿ ಶನಿವಾರ ಬೆಳಿಗ್ಗೆ ತನಕ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ದ.ಕ. ಜಿಲ್ಲೆಗಳಲ್ಲಿ ಭಾಗಶಃ ಮೋಡ ಮಧ್ಯಾಹ್ನದಿಂದ ನಿರಂತರ ತುಂತುರು ಅಥವಾ ಆಗಾಗ ಸಾಮಾನ್ಯ ಮಳೆಯ ಆರಂಭ ಆಗಬಹುದು. ಉಡುಪಿ ಉ.ಕ. ಜಿಲ್ಲೆಗಳ ಕರಾವಳಿ ತೀರದ ತಾಲ್ಲೂಕುಗಳಲ್ಲಿ ಇವತ್ತು ಉತ್ತಮ ಮಳೆಯ ಮುನ್ಸೂಚನೆ ಇದೆ. ವಾಯುಭಾರಕುಸಿತ ಶಿಥಿಲ ಆಗುತ್ತಿದ್ದಂತೆ 26ರಿಂದ ಮಳೆ ಕಡಿಮೆ ಆಗಬಹುದು.
ಮಲೆನಾಡಿನ ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ – ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟಪ್ರದೇಶಗಳಲ್ಲಿ ಉತ್ತಮ ಮಳೆಯಾಗಬಹುದು. ಕೊಡಗು ಜಿಲ್ಲೆಯ ಅಲ್ಲಲ್ಲಿ ಸಣ್ಣ ಮಳೆಯಾಗಲಿದ್ದು ಕೊಡಗು – ಹಾಸನ ಜಿಲ್ಲೆಯ ಕರಾವಳಿಗೆ ಹೊಂದಿಕೊಂಡಿರುವ ಘಟ್ಟಪ್ರದೇಶಗಳಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ ಕೊನೆಗೆ ಪೂರ್ವದ ಗುಡುಗು ಮಳೆ ಆರಂಭ ಆಗಬಹುದು.
ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಭಾಗಷಃ ಮೋಡದ ವಾತಾವರಣ ಇರಲಿದ್ದು ದಾವಣಗೆರೆ ವಿಜಯನಗರ ಚಿತ್ರದುರ್ಗ ತುಮಕೂರು ಬೆಂಗಳೂರು – ಗ್ರಾಮಾಂತರ ಚಿಕ್ಕಬಳ್ಳಾಪುರ ಕೋಲಾರ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ತುಂತುರು ಕೆಲವೆಡೆ ಸಾಮಾನ್ಯ ಮಳೆಯಾಗಬಹುದು. ನಾಳೆಯ ನಂತರ ಮಳೆ ಕಡಿಮೆ ಆದರೂ ಸೆಪ್ಟೆಂಬರ್ 29 ರಿಂದ ಮತ್ತೆ ಗುಡುಗು ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಇವತ್ತು ಮೋಡದ ವಾತಾವರಣ ಇರಲಿದ್ದು ಬೀದರ್ ಕಲ್ಬುರ್ಗಿ ಬೆಳಗಾವಿ ಧಾರವಾಡ ಗದಗ ಹಾವೇರಿ ಬಾಗಲಕೋಟೆ ಬಿಜಾಪುರ ಯಾದಗಿರಿ ರಾಯಚೂರು ಬಳ್ಳಾರಿ ಜಿಲ್ಲೆಗಳಲ್ಲಿ ತುಂತುರು – ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು. ಸೆ 26 ರಿಂದ ಮಳೆ ಕಡಿಮೆ ಆಗಿ ಬಿಸಿಲಿನ ವಾತಾವರಣ ಆರಂಭವಾಗಬಹುದು.
ಬಂಗಾಳಕೊಲ್ಲಿಯ ವಾಯುಭಾರ ಕುಸಿತ ಈಗಾಗಲೇ ಒರಿಸ್ಸಾ ಆಂಧ್ರ ಗಡಿಭಾಗದಲ್ಲಿ ಭೂ ಪ್ರವೇಶಿಸಿದ್ದು, ಇದು ಉತ್ತರ ದಿಕ್ಕಿನಲ್ಲಿ ಹಿಮಾಲಯದತ್ತ ಚಲಿಸಬಹುದು. ಪೂರ್ವ ಭಾರತ ಮತ್ತು ಹಿಮಾಲಯದ ತಪ್ಪಲಿನ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಭಾರತದ ಪಶ್ಚಿಮ ಕರಾವಳಿ ಜಿಲ್ಲೆಗಳಲ್ಲಿ 2-3 ದಿನ ಉತ್ತಮ ಮಳೆಯಾಗಲಿದ್ದು ಇದು ದುರ್ಬಲ ಆಗುತ್ತಿದ್ದಂತೆ ಸೆ 26 ರಿಂದ ರಾಜ್ಯದಲ್ಲಿ ಮಳೆ ಪೂರ್ತಿ ಕಡಿಮೆ ಆಗಬಹುದು. ಸೆಪ್ಟೆಂಬರ್ 29 ರಿಂದ ದಕ್ಷಿಣ ಕರ್ನಾಟಕದಲ್ಲಿ ಪೂರ್ವದ ಗುಡುಗು ಮಳೆ ಆರಂಭವಾಗುವ ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು