4:19 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್; ಮೃತ್ಯು ದವಡೆಯಿಂದ ಪಾಸ್!

12/06/2025, 23:29

ಅಹಮದಾಬಾದ್(reporterkarnataka.com):ಅಹಮದಾಬಾದ್ ಮಹಿಳೆಯೊಬ್ಬರು ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಏರ್‌ ಇಂಡಿಯಾ ವಿಮಾನ ಅಪಘಾತದಿಂದ ಪಾರಾಗಿದ್ದಾರೆ.
ಅಹಮದಾಬಾದ್‌ನ ಭೂಮಿ ಚೌಹಾಣ್ ಲಂಡನ್‌ಗೆ ಹೊರಟಿದ್ದರು. ಆದರೆ, ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಅಹಮದಾಬಾದ್ ವಿಮಾನ ನಿಲ್ದಾಣವನ್ನು 10 ನಿಮಿಷ ತಡವಾಗಿ ತಲುಪಿದ್ದರು. ಇದರಿಂದ ಅವರಿಗೆ ವಿಮಾನ ಏರಲು ಅನುಮತಿ ನಿರಾಕರಿಸಲಾಗಿತ್ತು. ಇದಾದ ಕೆಲವೇ ನಿಮಿಷಗಳಲ್ಲಿ ವಿಮಾನ ಅಪಘಾತದ ಸುದ್ದಿ ಬಂದಿದ್ದು, ಮಹಿಳೆ, ಮಾಧ್ಯಮಗಳ ಮುಂದೆ ಗದ್ಗದಿತರಾಗಿದ್ದಾರೆ.
ಈ ವಿಚಾರ ಕೇಳಿ ನನಗೆ ಭಯವಾಗಿ ಕೈಕಾಲುಗಳು ನಡುಗಲು ಪ್ರಾರಂಭಿಸಿದವು. ನಾನು ತುಂಬಾ ಹೊತ್ತು ಅದೇ ಆಘಾತದಲ್ಲಿದ್ದೆ. ಕೇವಲ 10 ನಿಮಿಷ ತಡವಾಗಿ ಬಂದಿದ್ದರಿಂದ ವಿಮಾನ ತಪ್ಪಿಸಿಕೊಂಡು ಬದುಕುಳಿದೆ. ನನ್ನ ನೆಚ್ಚಿನ ದೇವರಾದ ಗಣಪತಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನನ್ನ ಗಣಪತಿ ಬಪ್ಪಾ ನನ್ನನ್ನು ಉಳಿಸಿದ ಎಂದು ಹೇಳಿಕೊಂಡಿದ್ದಾರೆ.
ಭೂಮಿ ತಮ್ಮ ಪತಿಯೊಂದಿಗೆ ಲಂಡನ್‌ನಲ್ಲಿ ವಾಸವಾಗಿದ್ದರು. ರಜೆ ಇದ್ದ ಕಾರಣ ಭಾರತಕ್ಕೆ ಬಂದಿದ್ದರು. ಅವರ ಪತಿ ಈಗ ಬ್ರಿಟನ್‌ನಲ್ಲಿದ್ದಾರೆ. ಭೂಮಿ ಎರಡು ವರ್ಷಗಳ ಹಿಂದೆ ಲಂಡನ್‌ಗೆ ತೆರಳಿದ್ದರು. ಇದಾದ ಬಳಿಕ ಮೊದಲ ಬಾರಿಗೆ ಅವರು ಭಾರತಕ್ಕೆ ಬಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು