ಇತ್ತೀಚಿನ ಸುದ್ದಿ
ಮಾಣಿ ಸಮೀಪ ನಡುರಸ್ತೆಯಲ್ಲೇ ಯುವತಿಯ ಅಮಾನುಷ ಕೊಲೆ: ಆಟೋದಲ್ಲಿ ಬಂದ ತಂಡದ ಕೃತ್ಯ; ಆರೋಪಿಗಳ ಬಂಧನ
27/06/2022, 22:40
ಮಂಗಳೂರು(reporterkarnataka.com): ಸ್ಕೂಟರ್ ನಲ್ಲಿ ತೆರಳುತ್ತಿದ್ದ ಯುವತಿಯೊಬ್ಬಳ ಮೇಲೆ ಆಟೋದಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ
ಇರಿದು ಕೊಲೆ ಮಾಡಿದ ಅಮಾನುಷ ಘಟನೆ ಮಾಣಿಯ ನೇರಳಕಟ್ಟೆ ಎಂಬಲ್ಲಿ ನಡೆದಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.
ಮಾಣಿಯ ಕಾಪಿಕಾಡು ನಿವಾಸಿ ದಿ. ತ್ಯಾಂಪ ಪೂಜಾರಿ ಅವರ ಪುತ್ರಿ, ಪ್ರಸ್ತುತ ಅನಂತಾಡಿಯ ದೇವಿ ನಗರ ನಿವಾಸಿ ಶಕುಂತಲಾ(35) ಕೊಲೆಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ.
ಪುತ್ತೂರು ಕಡೆಯಿಂದ ಮಾಣಿ ಕಡೆಗೆ ಆಕ್ಟೀವಾ ವಾಹನದಲ್ಲಿ ತೆರಳುತ್ತಿದ್ದ ವೇಳೆ ಆಟೋ ರಿಕ್ಷಾದಲ್ಲಿ ಬಂದ ತಂಡ ಮಾರಕಾಯುಧಗಳಿಂದ ದಾಳಿ ನಡೆಸಿದೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕೊಂಡೊಯ್ದುರಾದರೂ ಅಷ್ಟರೊಳಗಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಇ. ನಾಗರಾಜ್ ರವರ ನೇತೃತ್ವದ ಪೊಲೀಸರ ತಂಡ ಆಗಮಿಸಿ ಮಾಹಿತಿ ಸಂಗ್ರಹಿಸಿದೆ. ಮೃತ ಮಹಿಳೆ ಪುತ್ತೂರಿನಲ್ಲಿ ಹೊಟೇಲ್ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.