9:13 AM Thursday27 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಮಾಜಿ ಸಿಎಂ ಯಡಿಯೂರಪ್ಪರಿಗೆ 1 ಕೋಟಿಯ ಟೊಯೋಟಾ ವೆಲ್‌ಫೈರ್ ಕಾರು: ಮುಂಬರುವ ಚುನಾವಣೆ ಪ್ರವಾಸಕ್ಕೆ ಬಳಕೆ? 

25/08/2021, 19:16

ಬೆಂಗಳೂರು(reporterkarnataka.com);

ಕುಟುಂಬದ ಜತೆ ಮಾಲ್ಡೀವ್ಸ್‌ ನಿಂದ 5  ದಿನಗಳ ಪ್ರವಾಸ ಮುಗಿಸಿ ಹಿಂತಿರುಗಿರುವ ಮಾಜಿ ಮುಖ್ಯಮಂತ್ರಿ ಬಿ. ಎಸ್ . ಯಡಿಯೂರಪ್ಪ ಅವರಿಗೆ ಸುಮಾರು 1 ಕೋಟಿ ಮೌಲ್ಯದ ಅತ್ಯಾಧುನಿಕ ಟೊಯೋಟಾ ಹೈಬ್ರಿಡ್ ಕಾರು ಬಂದಿದೆ.

ಹೊಸ ಟೊಯೋಟಾ ವೆಲ್‌ಫೈರ್ ಕಾರನ್ನು ಮಾಜಿ ಸಿಎಂ ಆಗಿರುವ ಯಡಿಯೂರಪ್ಪ ಅವರು 2023 ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆಗಾಗಿ ರಾಜ್ಯ ಪ್ರವಾಸ ಮಾಡಲು ಬಳಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

78ರ ಹರೆಯದ ಬಿಜೆಪಿ ಹಿರಿಯ ನಾಯಕ ಮಾಲ್ಡೀವ್ಸ್‌ನಿಂದ ಹಿಂತಿರುಗಿದಾಗ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಚ್ಚ ಹೊಸ ಟೊಯೋಟಾ ವೆಲ್‌ಫೈರ್ ಕಾರು ಅವರನ್ನು ಮನೆಗೆ ಕರೆದುಕೊಂಡು ಹೋಗಲು ಕಾಯುತ್ತಿತ್ತು.
ಯಡಿಯೂರಪ್ಪ ಅವರು ಜುಲೈ 26 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಯಡಿಯೂರಪ್ಪ, ಅವರು ರಾಜ್ಯದಾದ್ಯಂತ ತಮ್ಮ ಪ್ರವಾಸಕ್ಕೆ ಕಾರನ್ನು ಬಳಸುವ ನಿರೀಕ್ಷೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು