9:02 PM Monday6 - April 2026
ಬ್ರೇಕಿಂಗ್ ನ್ಯೂಸ್
Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ

ಇತ್ತೀಚಿನ ಸುದ್ದಿ

ಮಾಜಿ ಲೇಡಿ ಕಾರ್ಪೊರೇಟರ್ ಭೀಕರ ಹತ್ಯೆ: ಮನೆಯಿಂದ ಹೊರಗೆ ಕರೆದು ಮಾರಕಾಸ್ತ್ರದಿಂದ ಹಲ್ಲೆಗೈದು ಕೊಲೆ

24/06/2021, 15:51

ಬೆಂಗಳೂರು(reporterkarnataka news): ಛಲವಾದಿಪಾಳ್ಯದ ಫವರ್ ಗಾರ್ಡನ್ ನಲ್ಲಿ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಮನೆಯಿಂದ ಹೊರ ಕರೆದು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ.

ಮನೆಯಲ್ಲಿದ್ದ ರೇಖಾ ಕದಿರೇಶ್ ಅವರನ್ನು ಹೊರ ಬರುವಂತೆ ಕರೆದ ದುಷ್ಕರ್ಮಿಗಳು ಬಳಿಕ ಮಾರಕಾಸ್ತ್ರಗಳಿಂದ ಅವರ ಮೇಲೆ ದಾಳಿ ನಡೆಸಿದ್ದಾರೆ. ರಕ್ತದ ಮಡುವಲ್ಲಿ ಬಿದ್ದಿದ್ದ ರೇಖಾ ಅವರನ್ನು ಕೆಂಪೇಗೌಡ ಆಸ್ಪತ್ರೆಗೆ ದಾಖಲಿಸಲಾಗಿಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.

ಈ ಹಿಂದೆ ೨೦೧೮ರ ಫೆಬ್ರವರಿ ೮ರಂದು ರೇಖಾ ಪತಿ ಕದಿರೇಶ್ ಅವರನ್ನು ಮುನೇಶ್ವರ ದೇವಸ್ಥಾನದ ಬಳಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಶೋಬನ್ ಗ್ಯಾಂಗ್, ಕದಿರೇಶ್ ಅವರನ್ನು ಕೊಚ್ಚಿ ಕೊಲೆಗೈದಿತ್ತು. ಇದೀಗ ಅದೇ ಗ್ಯಾಂಗ್ ರೇಖಾ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಚಿಕ್ಕಪೇಟೆ ಎಸಿಪಿ ಹಾಗೂ ಕಾಟನ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು