11:44 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಮಾಜಿ ಮುಖ್ಯಮಂತ್ರಿಯ ಕಾಲೆಳೆದ ಮತ್ತೊಬ್ಬ ಮಾಜಿ ಸಿಎಂ!: ಬಿಎಸ್ ವೈ ರಾಜೀನಾಮೆ ಬಗ್ಗೆ ಸದನದಲ್ಲಿ ಸಿದ್ದರಾಮಯ್ಯ ಹೇಳಿದ್ದೇನು?

24/09/2021, 21:12

ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇನ್ನೊಬ್ಬ ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕಾಲೆಳೆದ ಘಟನೆ ವಿಧಾನ ಸಭೆಯಲ್ಲಿ ನಡೆಯಿತು.

ಶೂನ್ಯ ವೇಳೆಯಲ್ಲಿ ಸಿದ್ದರಾಮಯ್ಯ ಅವರು ಮಾತನಾಡುತ್ತಾ, ರಾಜ್ಯದಲ್ಲಿ ಆಪರೇಶನ್ ಕಮಲ ಮೂಲಕ ಬಿಜೆಪಿಯನ್ನು ಆಡಳಿತಕ್ಕೆ ತಂದವರು ಯಡಿಯೂರಪ್ಪ ಅವರು. ಆದರೆ ಬಿಜೆಪಿ ಹೈಕಮಾಂಡ್ ಬಲವಂತದಿಂದ 75ರ ಹರೆಯದ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಪದವಿಯಿಂದ ಕೆಳಗಿಳಿಸಿತು. ಯಡಿಯೂರಪ್ಪ 

ಅವರು ಸೂಚಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಸಿಎಂ ಪಟ್ಟ ನೀಡಲಾಯಿತು ಎಂದರು. ಈ ವೇಳೆ ಮಧ್ಯಪ್ರವೇಶಿಸಿದ ಯಡಿಯೂರಪ್ಪ ಅವರು ತನ್ನ ಮೇಲೆ ಯಾರೂ ಬಲವಂತ ಮಾಡಿಲ್ಲ. ಬೇರೆಯವರಿಗೆ ಅವಕಾಶ ನೀಡಲು ರಾಜೀನಾಮೆ ನೀಡಿದೆ. ಈ ವಿಷಯವನ್ನು ರಾಜೀನಾಮೆ ನೀಡಿದ ದಿನವೇ ಸ್ಪಷ್ಟಪಡಿಸಿದ್ದೇನೆ ಎಂದರು.

‘ಹಾಗಾದರೆ ಕಣ್ಣಲ್ಲಿ ನೀರು ಯಾಕೆ ಬಂತು?’ ಎಂದು ಪ್ರತಿಪಕ್ಷದ ಕಡೆಯಿಂದ ಸದಸ್ಯರೊಬ್ಬರು ಪ್ರಶ್ನಿಸಿದರು. ಇದಕ್ಕೆ ಪೂರಕವಾಗಿ ಮತ್ತೆ ಮಾತನಾಡಿದ ಸಿದ್ದರಾಮಯ್ಯ ಅವರು, ಯಡಿಯೂರಪ್ಪ ಅವರು ಕಣ್ಣೀರನ್ನು ಆನಂದ ಬಾಷ್ಫ ಎಂದು ಸಮರ್ಥಿಸಿಕೊಳ್ಳುತ್ತಾರೆ. ಅವರು ಏನೇ ಹೇಳಲಿ, ಬಿಜೆಪಿ ಹೈಕಮಾಂಡ್ ಮಾತ್ರ ಬಲವಂತದಿಂದ ಯಡಿಯೂರಪ್ಪ ಅವರ ರಾಜೀನಾಮೆ ಸ್ವೀಕರಿಸಿದೆ ಎಂದು ಸಿದ್ದರಾಮಯ್ಯ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು