2:09 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಮಾಜಿ ಮುಖ್ಯಮಂತ್ರಿ ಸಿದ್ದು ಬರ್ತ್ ಡೇ ಸ್ಪೆಷಲ್ : ತರೀಕೆರೆಯಲ್ಲಿ 75 ಕೆಜಿ ತೂಕದ ಕೇಕ್ ಕಟ್!!

02/08/2022, 21:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟುಹಬ್ಬದ ಅಂಗವಾಗಿ ಸಿದ್ದು ಅಭಿಮಾನಿಗಳು 75 ಕೆಜಿ ತೂಕದ ಕೇಕ್ ಕತ್ತರಿಸಿ ಸಿದ್ದರಾಮಯ್ಯನವರಿಗೆ ಶುಭ ಕೋರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಡೆದಿದೆ. 


ತರೀಕೆರೆ ಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ ಗೋಪಿಕುಮಾರ್ ಇಂದು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬರುವ ತರೀಕೆರೆ ಪಟ್ಟಣದ ಗಾಂಧಿ ವೃತ್ತದಲ್ಲಿ 75 ಕೆ.ಜಿ. ತೂಕದ ಕೇಕ್ ಕತ್ತರಿಸಿ ಸಿದ್ದರಾಮಯ್ಯ ಅವರಿಗೆ ಶುಭಕೋರಿದ್ದಾರೆ. ಇದೇ ವೇಳೆ, ಸಿದ್ದು ಹುಟ್ಟುಹಬ್ಬದ ಅಂಗವಾಗಿ ತರೀಕೆರೆ ಪಟ್ಟಣದ ಪಟ್ಟಣ ಪಂಚಾಯಿತಿಯ 23 ಜನ ಸದಸ್ಯರಿಗೂ ಪಕ್ಷಾತೀತವಾಗಿ ಸನ್ಮಾನಿಸಿದ್ದಾರೆ. ಜೊತೆಗೆ ನಾಳೆ ಸಿದ್ದರಾಮಯ್ಯನವರ ಹುಟ್ಟುಹಬ್ಬದ ಅಂಗವಾಗಿ ದಾವಣಗೆರೆಯಲ್ಲಿ ನಡೆಯುವ ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೂ ಗೋಪಿಕುಮಾರ್ ಸಾವಿರಕ್ಕೂ ಅಧಿಕ ಜನರನ್ನ ದಾವಣಗೆರೆಗೆ ಕರೆದೊಯ್ಯುತ್ತಿದ್ದಾರೆ. ಈಗಾಗಲೇ ಎರಡು ಬಸ್ ಹಾಗೂ ಎರಡು ಟಿಟಿ ವಾಹನಗಳಲ್ಲಿ ಸಿದ್ದು ಅಭಿಮಾನಿಗಳು ತುಂಬಿದ್ದು ಮತ್ತಷ್ಟು ಜನ ತಮ್ಮ ಸ್ವಂತ ವಾಹನದಲ್ಲಿ ದಾವಣಗೆರೆಗೆ ತೆರಳಲಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಮುಖಂಡರಾದ ಉಮ್ಮರ್ ಫಾರುಕ್, ಮಿರ್ಜಾ ಇಸ್ಮಾಯಿಲ್, ಧರ್ಮರಾಜ್, ಪ್ರಕಾಶ್ ವರ್ಮಾ ಸೇರಿದಂತೆ 250ಕ್ಕೂ ಅಧಿಕ ಜನ ರಸ್ತೆ ಮಧ್ಯೆ ಜಮಾಯಿಸಿ ಸಿದ್ದು ಹುಟ್ಟುಹಬ್ಬ ಆಚರಿಸಿದ್ದಾರೆ. ಇದೇ ವೇಳೆ, ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವೇ ಎಂದು ಘೋಷಣೆ ಕೂಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು