11:52 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಾಜಿ ಪ್ರಧಾನಿ ದೇವೇಗೌಡರಿಗೆ ಐಟಿ ಶಾಕ್: ಪತ್ನಿ ಚೆನ್ನಮ್ಮಗೆ ಆಸ್ತಿ ವಿವರ ನೀಡುವಂತೆ ನೋಟಿಸ್

28/03/2022, 22:45

ಹಾಸನ(reporterkarnataka.com): ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮಗೆ ಐಟಿ ಶಾಕ್ ನೀಡಿದ್ದು, ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಅವರಿಗೆ ನೋಟಿಸ್ ನೀಡಿದ್ದಾರೆ. ಚೆನ್ನಮ್ಮ ಅವರಿಗೆ ಸಂಬಂಧಿಸಿದ ಆಸ್ತಿ ವಿವರದ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

ಈ ಕುರಿತು ಪುತ್ರ ಮಾಜಿ ಸಚಿವ  ಎಚ್. ಡಿ. ರೇವಣ್ಣ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ ಅಧಿಕಾರಿಗಳಿಂದ ನನ್ನ ತಾಯಿಗೆ ನೋಟಿಸ್ ನೀಡಿದ್ದಾರೆ. ಆಸ್ತಿ ವಿವರದ ಮಾಹಿತಿ ಕೋರಿದ್ದಾರೆ. ಒಬ್ಬ ಮಾಜಿ ಪ್ರಧಾನಿ ಪತ್ನಿಗೆ ನೋಟಿಸ್ ಕೊಟ್ಟಿದ್ದಾರೆ. ಆದ್ರೇ ಇದಕ್ಕೆ ಉತ್ತರ ಕೊಡೋದು ಗೊತ್ತಿದೆ. ನನಗೆ ಕೊಟ್ಟಿದ್ದರೆ ಬೇಜಾರು ಇರಲಿಲ್ಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾವು ಕಬ್ಬು ಬೆಳೆದಿದ್ದೇವೆ. ಆಲೂಗಡ್ಡೆ ಬಳೆದಿದ್ದೇವೆ. ನಾವೇನು ಅಕ್ರಮವಾಗಿ ಕೋಟಿ ಕೋಟಿ ಸಂಪಾದಿಸಿಲ್ಲ. ಜೆಡಿಎಸ್ ಮುಖಂಡರಿಗೆ ಆಯ್ಕೆ ಮಾಡಿ ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು