10:54 AM Sunday28 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ಮಾಜಿ ಪ್ರಧಾನಿ ದೇವೇಗೌಡರ ಕುರಿತು ರಾಜಣ್ಣ ಹೇಳಿಕೆಗೆ ಬೇಷರತ್ ಕ್ಷಮೆಯಾಚಿಸಲಿ: ಹೊರಟ್ಟಿ

04/07/2022, 08:54

ಬೆಂಗಳೂರು(reporterkarnataka.com): ಮಾಜಿ ಪ್ರಧಾನಿ, ಹಿರಿಯ ರಾಜಕಾರಣಿ ಎಚ್.ಡಿ.ದೇವೇಗೌಡರ ವಯಸ್ಸು ಹಾಗೂ ಶಕ್ತಿಯ ಕುರಿತು ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರ ಅಪಹಾಸ್ಯದ ಮಾತುಗಳು ಸಲ್ಲ, ಕೂಡಲೇ ಅವರು ಬೇಷರತ್ ಕ್ಷಮೆಯಾಚಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ, ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಹೆಚ್.ಡಿ.ದೇವೇಗೌಡರು ಪ್ರಧಾನಿ ಹುದ್ದೆಗೆ ಏರಿದ ಏಕೈಕ ಕನ್ನಡಿಗರಾಗಿದ್ದಾರೆ. ಸುದೀರ್ಘ ಕಾಲದ ಅವರ ರಾಜಕೀಯ ಅನುಭವವನ್ನು ನಾಡು ಪಕ್ಷಾತೀತವಾಗಿ ಗೌರವಿಸಬೇಕು. ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರು ಹಿರಿಯರ ಕುರಿತು ಹೇಳಿಕೆ ನೀಡುವಾಗ ವೈಯಕ್ತಿಕ ಅಪಹಾಸ್ಯ, ಅಪನಿಂದೆಗಳಿಗೆ ಅವಕಾಶ ಕಲ್ಪಿಸಬಾರದು. ರಾಜಕಾರಣಿಗಳ ನಡೆಗಳು ನೈತಿಕತೆಯ ಎಲ್ಲೆ ಮೀರಬಾರದು. ಪ್ರತಿಯೊಂದು ಮಾತು, ಹೇಳಿಕೆಗಳು ಸಮಾಜದ ಮೇಲೆ ಪರಿಣಾಮ ಬೀರುತ್ತವೆ ಎಂಬುದರ ಅರಿವು ಸದಾ ಕಾಲ ಜಾಗೃತವಾಗಿರಬೇಕು. ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರು ಎಚ್.ಡಿ.ದೇವೇಗೌಡರನ್ನು ಖುದ್ದಾಗಿ ಭೇಟಿಯಾಗಿ ಬಹಿರಂಗ ಕ್ಷಮೆಯಾಚಿಸಬೇಕು ಇಂತಹ ತಪ್ಪುಗಳಿಗೆ ಪ್ರಾಯಶ್ಚಿತ್ತ ಅನುಭವಿಸಬೇಕು ಎಂದು ಹೊರಟ್ಟಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು