12:12 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಾಜಿ ಸಂಸದ ವೆಂಕಟೇಶ್ ನಾಯಕ್ ಹುಟ್ಟುಹಬ್ಬ ಪ್ರಯುಕ್ತ ಕೊರೊನಾ ವಾರಿಯರ್ಸ್ ಗೆ ಆಹಾರ ಪದಾರ್ಥ ವಿತರಣೆ

29/06/2021, 00:12

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ದೇವದುರ್ಗ ಅರಕೆರೆಯ ಹಿರಿಯ ರಾಜಕಾರಣಿ,

ಶ್ರೀದೇವಿ ಆರ್. ನಾಯಕ್ ಅವರ ತಾತ ಎ. ವೆಂಕಟೇಶ್ ನಾಯಕ್ ಅವರ ಹುಟ್ಟುಹಬ್ಬದ ಪ್ರಯುಕ್ತ ಕಾಂಗ್ರೆಸ್ ಪಕ್ಷದ ಸುಮಾರು 100 ಮಂದಿ ಕೊರೊನಾ ವಾರಿಯರ್ಸಗಳಿಗೆ 25 ಕೆಜಿ ಅಕ್ಕಿ ಹಾಗೂ ಆಹಾರ ಪದಾರ್ಥಗಳು ಮತ್ತು ತರಕಾರಿಯನ್ನು ಕೆಪಿಸಿಸಿ ರಾಜ್ಯ ಮಹಿಳಾ ಮಹಿಳಾ ಕಾರ್ಯದರ್ಶಿ ಶ್ರೀದೇವಿ ನಾಯಕ್ ವಿತರಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿವರ್ಷ ತಾತನವರ ಹುಟ್ಟುಹಬ್ಬದ ಕಾರ್ಯಕ್ರಮ ನಡೆಸಲಾಗುತ್ತಿದೆ. ಪ್ರತಿ ವರ್ಷ ಈ ಕಾರ್ಯಕ್ರಮದಲ್ಲಿ ಬಡವರು, ಕಷ್ಟದಲ್ಲಿರುವವರಿಗೆ ಸಹಾಯ ಮಾಡಲಾಗುತ್ತದೆ. ಅವರಿಗೆ ಒಳ್ಳೆಯದಾದರೆ ನಮಗೂ ಒಳ್ಳೆಯ ಆಗುತ್ತೆ ಎನ್ನುವ ನಿಟ್ಟಿನಲ್ಲಿ  ಕಾರ್ಯಕ್ರಮದ ಕಾರ್ಯಗಳ ನೆರವೇರಿಸುವ ಮೂಲಕ ಹಿರಿಯ ರಾಜಕಾರಣಿ ಎ. ವೆಂಕಟೇಶ್ ನಾಯಕ್ ಅವರನ್ನು ನಾವು ಸ್ಮರಿಸುತ್ತೇವೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗುತ್ತಿದ್ದೇವೆ ಎಂದು ಹೇಳಿದರು.

ದೇವದುರ್ಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಅರಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪುರಸಭೆ ಸದಸ್ಯರು, ತಾಲ್ಲೂಕು ಪಂಚಾಯಿತಿ ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು,  ಕಾಂಗ್ರೇಸಿನ ಹಿರಿಯ ಮುಖಂಡರು, ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾಮಾಜಿಕ ಜಾಲತಾಣದ ಅಧ್ಯಕ್ಷರುಗಳು ಹಾಗೂ ಶ್ರೀದೇವಿ ನಾಯಕ್ ಅಭಿಮಾನಿಗಳ ಬಳಗದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು