2:26 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಮಾಜಿ ಶಾಸಕ ವಸಂತ ಬಂಗೇರ ನಿಧನ: ಸ್ಪೀಕರ್, ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಸಹಿತ ಹಲವು ಗಣ್ಯರ ಸಂತಾಪ

09/05/2024, 10:51

ಬೆಂಗಳೂರು/ಮಂಗಳೂರು(reporterkarnataka.com): ಬೆಳ್ತಂಗಡಿ ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ನಾಯಕ ಕೆ. ವಸಂತ ಬಂಗೇರ ಅವರ ನಿಧನಕ್ಕೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಸಂತಾಪ‌ ಸೂಚಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ರಾಜಕೀಯ ಮುತ್ಸದ್ದಿ,ಬೆಳ್ತಂಗಡಿಯ ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ ನಿಧನರಾಗಿದ್ದು ತೀವ್ರ ಸಂತಾಪ ವ್ಯಕ್ತಪಡಿಸುತ್ತಿದ್ದೇನೆ.
ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ,ಕುಟುಂಬ ವರ್ಗದವರಿಗೆ, ಹಿತೈಷಿಗಳಿಗೆ, ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು
ಸ್ಪೀಕರ್ ಯು. ಟಿ ಖಾದರ್ ಹೇಳಿದ್ದಾರೆ.
ವಸಂತ ಬಂಗೇರ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಬಿಜೆಪಿ, ಜನತಾದಳ, ಕಾಂಗ್ರೆಸ್ ಈ ಮೂರೂ ಪಕ್ಷಗಳಿಂದ ಸ್ಪರ್ಧಿಸಿ ಗೆದ್ದು ಅವರು ಶಾಸಕರಾಗಿದ್ದರು.
ಅವರ ಕುಟುಂಬಸ್ಥರು, ಬಂಧು- ಮಿತ್ರರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ವಸಂತ ಬಂಗೇರ ಅವರ ಅಗಲಿಕೆ ಕರಾವಳಿ ಜನತೆಗೆ ತುಂಬಲಾರದ ನಷ್ಟ ಉಂಟು ಮಾಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ ಕುಂಪಲ ಅವರು ಕಂಬನಿ ಮಿಡಿದಿದ್ದಾರೆ.
ಬೆಳ್ತಂಗಡಿ ತಾಲೂಕಿನ ಹಿರಿಯ ರಾಜಕೀಯ ಮುತ್ಸದ್ಧಿಯಾದ ಅವರು ಬಿಜೆಪಿಯು ದೇಶದಲ್ಲಿ ನೆಲೆ ನಿಲ್ಲುತ್ತಿರುವ ಸಂದರ್ಭದಲ್ಲಿ ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿಯನ್ನು ಪ್ರತಿನಿಧಿಸಿದವರು.
ಕಾಲಾಂತರದಲ್ಲಿ ರಾಜಕೀಯವಾಗಿ ಬೇರೆ ಹಾದಿ ಹಿಡಿದರೂ, ತನ್ನ ಸ್ವಸಾಮರ್ಥ್ಯದಿಂದ ಕರಾವಳಿಯ ರಾಜಕೀಯದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ ಅಪರೂಪದ ರಾಜಕಾರಣಿ ಆಗಿದ್ದರು. ಇಂಥಹ ಧೀಮಂತ ನಾಯಕನ ಅಗಲಿಕೆಯು ಕರ್ನಾಟಕ ಹಾಗೂ ಕರಾವಳಿಯ ಜನತೆಯ ಪಾಲಿಗೆ ತುಂಬಲಾರದ ನಷ್ಟವನ್ನು ಉಂಟುಮಾಡಿದೆ.
ಮಾಜಿ ಶಾಸಕರಾದ ವಸಂತ ಬಂಗೇರ ಅವರ ಅಗಲಿದ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲಿ ಹಾಗೂ ಶ್ರೀಯುತರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಇವರ ಕುಟುಂಬ, ಬಂಧುವರ್ಗ ಹಾಗು ಅಪಾರ ಸ್ನೇಹಿತವರ್ಗಕ್ಕೆ ಆ ಭಗವಂತ ದಯಪಾಲಿಸಲಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು