10:20 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಮಾಜಿ ಸ್ಪೀಕರ್ ರಮೇಶ್ ಕುಮಾರ್ ರಸ್ತೆಯಲ್ಲೇ ಧರಣಿ: ಹಣ ಕೊಟ್ಟರೆ ಮಾತ್ರ ಪೊಲೀಸರು ವಾಹನ ಬಿಡುತ್ತಾರಂತೆ! !

04/06/2021, 07:41

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ನೆರೆಯ ರಾಜ್ಯದ ವಿದ್ಯಾಂವತರು ಬೆಂಗಳೂರಿನಲ್ಲಿ ಕೆಲಸದ ನಿಮಿತ್ತ ವಾಸಗಿದ್ದು, ಕೊರೊನಾ ಮಹಾಮಾರಿಯಿಂದ ತಮ್ಮ ಸ್ವಂತ ಗ್ರಾಮಕ್ಕೆ ಹಿಂತಿರುಗುತ್ತಿದ್ದಾರೆ. ಇಂತಹ ಸಮಯದಲ್ಲಿ ಪೊಲೀಸರು ಹಣ ಕೊಟ್ಟರೆ ಗಾಡಿ ಬಿಡುತ್ತೇವೆ ಇಲ್ಲವಾದರೆ ಇಲ್ಲವೆಂದು ಮನ ಬಂದಂತೆ ನಿಂದಿಸುತ್ತಾರೆ. ಮೊದಲೇ ಮಾನಸಿಕವಾಗಿ ಹಾಗೂ ದೈಹಿಕವಾಗಿ ಶ್ರಮದಿಂದ ಬಳುಲುತ್ತಿರುವ ಪ್ರಯಾಣಿಕರಿಗೆ ಪೊಲೀಸರಿಂದ ತಪ್ಪಿಸಿಕೊಳ್ಳುವುದೇ ದೊಡ್ಡ ಪರೀಕ್ಷೆಯಾಗಿ ಇತ್ತೀಚಿನ ದಿನಗಳಲ್ಲಿ ಸೃಷ್ಟಿಯಾಗಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಮಾಜಿ ಸ್ಪೀಕರ್, ಶಾಸಕ ಕೆ.ಆರ್.ರಮೇಶ್‌ ಕುಮಾರ್ ಹೇಳಿದರು.

ರಾಯಲ್ಪಾಡ್‌ನ ಹಕ್ಕಿಪಿಕ್ಕಿ ಚಕ್‌ಪೋಸ್ಟ್‌ನಲ್ಲಿ ಪೊಲೀಸ್ ಇಲಾಖೆಯ ವಿರುದ್ಧ ಏಕಾಂಗಿಯಾಗಿ ಧರಣಿಗೆ ಕುಳಿತು ಮಾತನಾಡಿದರು.

ನಮಗೆ ಎಂದು ಅರಿಯದ, ನಮಗೆ ತಿಳಿಯದ ರೋಗವೊಂದು ದೇಶವ್ಯಾಪಿಯಾಗಿ ಜನರನ್ನು ಪೀಡಿಸುತ್ತಿದೆ. ರೋಗವನ್ನ ತಡೆಗಟ್ಟುವ ಸಲುವಾಗಿ ರಾಜ್ಯ ಹಾಗೂ ನೆರಯ ರಾಜ್ಯ ಸರ್ಕಾರವು ಕೆಲ ಮಾರ್ಗೋಪಾಯಗಳನ್ನು ಅನುಸರಿಸುತ್ತಿದೆ. ಇದರ ಹಿನ್ನಲೆಯಲ್ಲಿ ವಾಹನಗಳಿಗೆ ಕೆಲ ನಿರ್ಬಂಧನೆಗಳನ್ನು ಎರಡು ಸರ್ಕಾರಗಳು ವಿಧಿಸಿದೆ. ಸದುದ್ದೇಶದಿಂದ ಮಾಡಿರುವ ಮಾರ್ಗೋಪಾಯ ಮಾನವೀಯತೆ ಇಲ್ಲದೆ. ಒಂದಿಬ್ಬರು ಅಧಿಕಾರಿಗಳು ಇದೇ ಅವಕಾಶವನ್ನು ಬಳಿಸಿಕೊಂಡು ಎರಡು ರಾಜ್ಯಗಳ ರೈತ ವರ್ಗ ಹಾಗೂ ಸಾಮಾನ್ಯ ಜನತೆ ಬಳಿ ಇಲಾಖೆಯು ಅಮಾನೀಯವಾಗಿ ತೊಂದರೆ ಕೊಡುತ್ತಿದೆ ಎಂದು ಇಲಾಖೆಯ ವಿರುದ್ಧ ಗುಡುಗಿದರು. ಭ್ರಷ್ಟಾಚಾರ, ಲಂಚವನ್ನು ಸ್ವೀಕರಿಸುವವರ ವಿರುದ್ದ ಅನೇಕ ಭಾರಿ ಹೋರಾಟಗಳನ್ನು ನಡೆಸಿದ್ದೇನೆ, ಅಮಾನತುಗೊಂಡ ಅಧಿಕಾರಿಗಳು ದಿನ ಕಳೆದಂತೆ ಪುನಃ ಇಲಾಖೆಗೆ ಸೇರಡೆಯಾಗುತ್ತಾರೆ. ಆದರೆ ಇಂತಹ ಅಧಿಕಾರಿಯನ್ನ ವಜಾ ಮಾಡಿ ಇಲಾಖೆಯ ಗೌರವ ಕಾಪಾಡಿಕೊಳ್ಳುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಇಲಾಖೆಯಲ್ಲಿ ಇಂತಹ ಘಟನೆ ಪುನಾರಾವರ್ತನೆಯಾಗದಂತೆ ಇಲಾಖೆ ಎಚ್ಚರ ವಹಿಸಬೇಕು.ಜಿಲ್ಲೆಯ ಹಿರಿಯ ಅಧಿಕಾರಿಗಳು ಧರಣಿಯ ಸ್ಥಳಕ್ಕೆ ಬರುವ ತನಕ ಸ್ಥಳದಿಂದ ನಿರ್ಗಮಿಸುವುದಿಲ್ಲ ಎಂದಾಗ, ಜಿಲ್ಲೆಯ ಹಿರಿಯ ಅಧಿಕಾರಿಗಳು ಧರಣಿ ನಿರತ ಸ್ಥಳಕ್ಕೆ ಭೇಟಿ ನೀಡಿ ಶಾಸಕರರೊಂದಿಗೆ ಚರ್ಚೆ ಮಾಡಿದರು. ನಂತರ ಠಾಣಾಧಿಕಾರಿಯವರನ್ನ ಅಮಾನತು ಮಾಡಿದ ನಂತರ ಕೆ.ಆರ್‌.ರಮೇಶ್‌ಕುಮಾರ್‌ ಅವರು ಧರಣಿ ವಾಪಸ್ಸು ಪಡೆದರು. 

ಅಡಿಸಿನಲ್ ಎಸ್ಪಿ ಬಿ.ಎಂ.ನಾರಾಯಣಸ್ವಾಮಿ, ಡಿವೈಎಸ್‌ಪಿ ಗಿರಿ, ರಾಘವೇಂದ್ರಪ್ರಕಾಶ್, ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂಜಯ್‌ರೆಡ್ಡಿ, ಟಿಎಪಿಸಿಎಂಎಸ್ ತಾಲೂಕು ಅಧ್ಯಕ್ಷ ಬಗ್ಗಲಘಟ್ಟ ಶ್ರೀನಿವಾಸ್‌ರೆಡ್ಡಿ, ಮುಖಂಡರಾದ ಕೆ.ಕೆ.ಮಂಜುನಾಥರೆಡ್ಡಿ, ರಾಯಲ್ಪಾಡು ಗ್ರಾ.ಪಂ.ಅಧ್ಯಕ್ಷೆ ಅರುಣ್‌ವೆಂಕಟ್, ಸದಸ್ಯರಾದ ಆರ್.ಗಂಗಾಧರ್, ಅಶೋಕ್ ರೆಡ್ಡಿ, ನಾಗೇಶ್ , ಮುದಿಮಡುಗು ಗ್ರಾಪಂ ಅಧ್ಯಕ್ಷ ಚಿಕ್ಕನಾರಾಯಣಪ್ಪ , ಕೂರಿಗೇಪಲ್ಲಿ ಗ್ರಾ.ಪಂ.ಅಧ್ಯಕ್ಷ ವಿಶ್ವನಾಥರೆಡ್ಡಿ ಇತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು