4:27 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಮಾಳ: ಟ್ಯಾಂಕರ್- ಬೈಕ್ ಭೀಕರ ಅಪಘಾತ; ಸವಾರ ವಿದ್ಯಾರ್ಥಿ ಸ್ಥಳದಲ್ಲೇ ಸಾವು, ಸಹ ಸವಾರೆಗೆ ಗಾಯ

02/02/2023, 21:47

ಕಾರ್ಕಳ(reporterkarnataka.com): ಮಾಳ ಚೆಕ್ ಪೋಸ್ಟ್ ಬಳಿ ಟ್ಯಾಂಕರ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.

ಮಹಾರಾಷ್ಟ್ರ ಮೂಲದ ವೈಭವ್ ಎಂಬ ಕಾಲೇಜು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯೊಬ್ಬಳು ಬೈಕ್ ನಲ್ಲಿ ಹೊರನಾಡು ದೇವಸ್ಥಾನಕ್ಕೆ ಹೋಗಿ ವಾಪಸ್ ಬರುವಾಗ ಈ ದುರಂತ ಸಂಭವಿಸಿದೆ.

ಬೈಕ್ ನಲ್ಲಿದ್ದ ಸಹ ಸವಾರೆ ಕೋಲಾರ ಮೂಲದ ವಿದ್ಯಾರ್ಥಿನಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಬ್ಬರೂ ಕರಾವಳಿ ಆಯುರ್ವೇದ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.

ವಿದ್ಯಾರ್ಥಿನಿ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು