7:26 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಾನಹಾನಿ ಪ್ರಕರಣ ಆರೋಪಿಗಳನ್ನು ಬಂಧಿಸುವಲ್ಲಿ ಯಾಕೆ ಪೊಲೀಸ್ ಇಲಾಖೆ ವಿಫಲ?

26/10/2022, 22:04

ಹೆಣ್ಣುಮಕ್ಕಳನ್ನು ಭಾರತದಲ್ಲಿ ಪೂಜನೀಯ ಭಾವನೆಯಲ್ಲಿ ನೋಡುತ್ತೇವೆ. ಆದರೆ ಇತ್ತೀಚೆಗೆ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಮಾನಹಾನಿಕಾರವಾಗಿ ಬರೆದಿರುವ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡಸುವಂತೆ ಮಂಗಳೂರು ಪೊಲೀಸ್ ಕಮೀಷನರ್‌ಗೆ ಖುದ್ದಾಗಿ ದೂರನ್ನೂ ನೀಡಲಾಗಿದೆ. ಹಲವಾರು ಸಂಘಟನೆಗಳಿಂದ ಆಗ್ರಹಗಳೂ ಕೇಳಿ ಬಂದಿವೆ. ಇಷ್ಟಿದ್ದರೂ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ದುರ್ಬಲ ಆಗಿದೆಯೇ? ಆರೋಪಿಯನ್ನು ಬಂಧಿಸಲು ಯಾಕೆ ಮೀನಮೇಷ ಎನಿಸುತ್ತಾರೆ? ಈ ಪ್ರಕರಣವನ್ನು ಇಡೀ ಸಮಾಜ ಗಮನಿಸುತ್ತಿದೆ. ಈ ಪ್ರಕರಣ ಹೆಣ್ಣು ಕುಲಕ್ಕೆ ಅವಮಾನ ಮಾಡಿದಂತಿದೆ. ಪ್ರತಿಭಾ ಕುಳಾಯಿ ಮಾತ್ರವಲ್ಲ ಯಾವುದೇ ಹೆಣ್ಣುಮಕ್ಕಳಿಗೆ ಈ ರೀತಿಯ ದೌರ್ಜನ್ಯವಾದರೆ, ಸೂಕ್ತ ಕ್ರಮ‌ಕೈಗೊಳ್ಳುವುದು ಸರ್ಕಾರದ ಕರ್ತವ್ಯ. ಈ ಬಗ್ಗೆ ಯಾಕೆ ಸರ್ಕಾರ ಮೌನ ವಹಿಸಿದೆ?. ಸಣ್ಣಪುಟ್ಟ ಘಟನೆಗಳ ಬಗ್ಗೆ ನಿರ್ಧಾರ ಕೈಗೊಳ್ಳುವ ಪೊಲೀಸ್ ಇಲಾಖೆ ಈ ಪ್ರಕರಣದ ಬಗ್ಗೆ ಯಾಕೆ ಮೌನವಹಿಸಿದೆ?

-ಪದ್ಮರಾಜ್ ಆರ್.
ವಕೀಲರು ಮತ್ತು ಸಾಮಾಜಿಕ ಚಿಂತಕರು ಮಂಗಳೂರು

ಇತ್ತೀಚಿನ ಸುದ್ದಿ

ಜಾಹೀರಾತು