8:44 PM Thursday15 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮಾನಹಾನಿಕರ ಸುದ್ದಿ, ಫೋಟೋ ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದ ಮೂಡುಬಿದರೆ ಶಾಸಕ ಉಮಾನಾಥ ಕೋಟ್ಯಾನ್

11/04/2023, 21:20

ಮೂಡುಬಿದರೆ(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆಯಾಗುವ ಮುನ್ನವೇ ಶಾಸಕ ಉಮಾನಾಥ ಕೋಟ್ಯಾನ್ ಅವರು ತನ್ನ ಕುರಿತು ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.
ಪುತ್ತೂರು ಶಾಸಕರದೆನ್ನಲಾದ ಫೋಟೋಗಳು ವೈರಲ್ ಆದ ಬೆನ್ನಲ್ಲೇ ಬಿಜೆಪಿಯ ಮತ್ತೊಬ್ಬ ಶಾಸಕ ಕೋರ್ಟ್ ನಿಂದ ತಡೆಯಾಜ್ಞೆ ತಂದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಮೂಡುಬಿದರೆ ಹಾಲಿ ಶಾಸಕರಾದ ಉಮಾನಾಥ ಕೋಟ್ಯಾನ್ ಅವರಿಗೆ ಬಿಜೆಪಿ ಈ ಬಾರಿ ಟಿಕೆಟ್ ನೀಡಲಾರದು ಎಂಬ ಸುದ್ದಿಯ ಬೆನ್ನಲ್ಲೇ ಚುನಾವಣೆಗೆ ಇನ್ನೇನು ಒಂದು ತಿಂಗಳು ಬಾಕಿ ಉಳಿದಿರುವಾಗ ಉಮಾನಾಥ ಕೋಟ್ಯಾನ್ ಅವರು ಬೆಂಗಳೂರಿನ ಜೆಎಂಎಫ್ ಸಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ರಾಜ್ಯದ 40ಕ್ಕೂ ಹೆಚ್ಚು ಮಾಧ್ಯಮಗಳಲ್ಲಿ ಯಾವುದೇ ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ಅವರು ತಡೆಯಾಜ್ಞೆ ತಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು