1:29 AM Tuesday6 - October 2026
ಬ್ರೇಕಿಂಗ್ ನ್ಯೂಸ್
ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್

ಇತ್ತೀಚಿನ ಸುದ್ದಿ

ಮಾನ್ವಿ ಸಮೀಪದ ಕಪಗಲ್ ಬಳಿ ಭೀಕರ ರಸ್ತೆ ಅಪಘಾತ: ಇಬ್ಬರು ವಿದ್ಯಾರ್ಥಿಗಳ ದಾರುಣ ಸಾವು; 32ಕ್ಕೂ ಹೆಚ್ಚು ಮಂದಿಗೆ ಗಾಯ

05/09/2024, 15:28

ಶಿವು ರಾಠೋಡ ಹುಣಸಗಿ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಬಳಿ ಸಾರಿಗೆ ಬಸ್​ ಹಾಗೂ ಶಾಲಾ ಬಸ್​ ನಡುವೆ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಭೀಕರ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಕೈ, ಕಾಲು ಛಿದ್ರಗೊಂಡಿವೆ.


ಕೆಎಸ್​ಆರ್​ಟಿಸಿ ಬಸ್ ಮತ್ತು ಶಾಲಾ ಬಸ್​ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 32 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಸಮರ್ಥ್​​(7), ಶ್ರೀಕಾಂತ್(12) ಮೃತ ವಿದ್ಯಾರ್ಥಿಗಳು. 32 ಜನರ ಪೈಕಿ 18 ಗಾಯಾಳುಗಳಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತು 14 ವಿದ್ಯಾರ್ಥಿಗಳಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಭೀಕರ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಕೈ, ಕಾಲು ಛಿದ್ರಗೊಂಡಿವೆ. ಪೋಷಕರು ಘಟನೆ ನಡೆದ ಸ್ಥಳಕ್ಕೆ ಬಂದು ರೋಧಿಸಿದ್ದಾರೆ. ಮಕ್ಕಳ ಪರಿಸ್ಥಿತಿ ನೋಡಿ ಬಿಕ್ಕಿ ಬಿಕ್ಕಿ ಅತ್ತಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಆಸ್ಪತ್ರೆಯತ್ತ ಮಕ್ಕಳ ಪೋಷಕರು ಆಗಮಿಸುತ್ತಿದ್ದು, ಐಸಿಯುನಲ್ಲಿ ಮಕ್ಕಳನ್ನ ತೋರಿಸುವಂತೆ ಪೋಷಕರು ಪಟ್ಟು ಹಿಡಿದಿದ್ದಾರೆ. ಈ ವೇಳೆ ಪೊಲೀಸರು ಮತ್ತು ಪೋಷಕರೊಂದಿಗೆ ವಾಗ್ವಾದ ಉಂಟಾಗಿದೆ. ಸದ್ಯ ರಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳು ಮಕ್ಕಳಿಗೆ ಚಿಕಿತ್ಸೆ ಮುಂದುವರೆದಿದ್ದು, ಚಿಕಿತ್ಸೆ ಸ್ಪಂದಿಸುತ್ತಿರುವ ಮಕ್ಕಳಿನ್ನು ವಾರ್ಡ್​ಗಳಿಗೆ ಶಿಫ್ಟ್ ಮಾಡಲಾಗಿದ್ದು, ಕೆಲವರನ್ನು ಐಸಿಯುಗೆ ಶಿಫ್ಟ್ ಮಾಡಲಾಗಿದೆ.
*ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ:*
ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಡಿಸಿ ಕೆ.ನಿತೇಶ್‌‌ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮ ಸಮೀಪ ನಡೆದಿದ್ದ ಅಪಘಾತ ಸಂಭವಿಸಿದೆ. ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗಾಯಗೊಂಡ ಮಕ್ಕಳ ಚಿಕಿತ್ಸೆಗೆ ತಲಾ 3 ಲಕ್ಷ ರೂ. ನೆರವು ನೀಡಲಾಗುತ್ತಿದೆ ಎಂದಿದ್ದಾರೆ.
ಗಾಯಾಳುಗಳಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು