1:24 AM Sunday11 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಮಾರುಕಟ್ಟೆ, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮೇಲೆ ಹಠಾತ್ ದಾಳಿ: 12 ಮಂದಿ ಬಾಲಕಾರ್ಮಿಕರ ರಕ್ಷಣೆ

22/08/2024, 13:45

ಶಿವು ರಾಠೋಡ ಶಹಾಪುರ

info.reporterkarnataka@gmail.com

ನಗರದ ಬಸವೇಶ್ವರ ವೃತ್ತ, ಮಾರುಕಟ್ಟೆ ಹಾಗೂ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಹಠಾತ್ ದಾಳಿ/ತಪಾಸಣೆ ನಡೆಸಿ, 12 ಮಕ್ಕಳನ್ನು ರಕ್ಷಿಸಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಯಿತು.
Rescue and Rehabilitation Campaing ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ಅಂಗವಾಗಿ ಪೂರ್ವಭಾವಿ ಸಭೆ ಹಾಗೂ ತಾಲ್ಲೂಕು ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ತಾಲ್ಲೂಕು ಮಟ್ಟದ ಕಾರ್ಯಪಡೆ ಸಮಿತಿ ಸಭೆಯನ್ನು ಉಪ ತಹಸೀಲ್ದಾರರು ಶಹಾಪುರ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ನಂತರ ಮಾತನಾಡಿದ ಶಹಾಪುರ ಉಪ-ತಹಸೀಲ್ದಾರರಾದ ಸೇತುಮಾಧವ ಅವರು ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪ್ರತಿ ತಿಂಗಳು 15 ತಪಾಸಣೆ ಮತ್ತು ಹಠಾತ್ ದಾಳಿ/ತಪಾಸಣೆ ಆಯೋಜಿಸಿವುದು. ಮತ್ತು ಪ್ರತಿ ತಿಂಗಳು 2 ಕಾನೂನು ಅರಿವು-ನೆರವು ಮತ್ತು ಜನ-ಜಾಗೃತಿ ಕಾರ್ಯಕ್ರಮ ಆಯೋಜಿಸುವುದು. ಶಾಲೆ ಬಿಟ್ಟು ಕೃಷಿ ಮತ್ತು ಇತರೆ ಕೆಲಸಗಳಿಗೆ ಮಕ್ಕಳು ಹೋಗದಂತೆ ಶಾಲಾ ಶಿಕ್ಷಕರಿಂದ ಪಾಲಕ ಪೋಷಕರಿಗೆ ಜಾಗೃತಿ ಮೂಡಿಸಬೇಕು ಎಂದು ಸಭೆಯಲ್ಲಿ ತಿಳಿಸಿದರು.


ಸಹಾಯಕ ಸರ್ಕಾರಿ ಅಭಿಯೋಜಕರಾದ ದಿವ್ಯರಾಣಿ ರವರು ಮಾತನಾಡಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ನವದೆಹಲಿ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಮತ್ತು ಕಾರ್ಮಿಕ ಆಯುಕ್ತರು ಬೆಂಗಳೂರು ರವರ ಸೂಚನೆಯಂತೆ, ಸ್ವತಂತ್ರ ದಿನಾಚರಣೆ 2024ರ ಅಂಗವಾಗಿ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿಗೊಳಿಸಿ ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ದಿನಾಂಕ: 01.08.2024 ರಿಂದ 31.08.2024ರ ರವರೆಗೆ ರಕ್ಷಣಾ ಕಾರ್ಯಚರಣೆಗೆ ಸರಕಾರದ ಪ್ರತಿಯೊಂದು ಇಲಾಖೆಯು ಕೈಜೊಡಿಸಿದಾಗ ಮಾತ್ರ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಎಂಬ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದು ತಿಳಿಸಿದರು.

ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ರಿಯಾಜ್ ಪಟೇಲ್ ವರ್ಕನಳ್ಳಿ ಮಾತನಾಡಿ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಕಾರ್ಮಿಕ ಇಲಾಖೆಯಿಂದ ನಿರÀಂತರವಾಗಿ ಜನ-ಜಾಗೃತಿ, ಕಾನೂನು ಅರಿವು-ನೆರವು ಕಾರ್ಯಕ್ರಮ, ಬೀದಿನಾಟಕಗಳನ್ನು ನಡೆಸಲಾಗುತ್ತಿದೆ. ಇದನ್ನು ಮೀರಿಯೂ ಸಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂತಹ ಅಂಗಡಿ ಮಾಲೀಕರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುವುದೆಂದು ತಿಳಿಸಿದರು.
ಶಹಾಪುರ ಕಾರ್ಮಿಕ ನಿರೀಕ್ಷಕರಾದ ಸಾಬೇರಾ ಬೇಗಂ ಮಾತನಾಡಿ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಂಡಲ್ಲಿ ಅಂತಹ ಅಂಗಡಿ ಮಾಲೀಕರ ವಿರುದ್ಧ ರೂ, 20,000 ರೂಗಳಿಂದ 50,000 ರೂ ಗಳವರೆಗೆ ದಂಡ ಮತ್ತು 6 ತಿಂಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನು ಸಹ ವಿಧಿಸಲಾಗುವುದು ಎಂದು ತಿಳಿಸಿದರು.
ಹಠಾತ್ ದಾಳಿ ಸಂಧರ್ಭದಲ್ಲಿ ದಿವ್ಯರಾಣಿ ಎಸ್. ನಾಯಕ ಸಹಾಯಕ ಸರಕಾರಿ ಅಭಿಯೋಜಕರು ಶಹಾಪುರ, ಶ ಸತ್ಯಮ್ಮ ಹೊಸಮನಿ ಪ್ಯಾನಲ್ ವಕೀಲರು ಶಹಾಪುರ, ಸಿದ್ದು ಪಸ್ಪುಲ್ ಪ್ಯಾನಲ್ ವಕೀಲರು ಶಹಾಪುರ, ಲಕ್ಷ್ಮೀಕಾಂತ ಶಿಬರಬಂಡಿ ಪ್ಯಾನಲ್ ವಕೀಲರು ಶಹಾಪುರ, ಶೀರಸ್ತೇದಾರರಾದ ಸೋಮನಾಥ ಅಂಗಡಿ, ಸಂಗಣ್ಣ ನುಚ್ಚಿನ್ ಹಿರಿಯ ಆರೋಗ್ಯ ನಿರೀಕ್ಷಣ ಅಧಿಕಾರಿಗಳು ಶಹಾಪುರ, ಬಾಲರಾಜ್ ಕೋರಬಾರ ಮ್ಯಾನೆಜರ್ ಸಮಾಜ ಕಲ್ಯಾಣ ಇಲಾಖೆ ಶಹಾಪುರ, ಕಾರ್ಮಿಕ ಇಲಾಖೆಯ ಮೊಹಮ್ಮದ್ ಏಥೇಶ್ಯಾಮ್, ಬಾಲು ನಾಯಕ, ಮಾರ್ಗದರ್ಶಿ ಸಂಸ್ಥೆಯ ಸಿಬ್ಬಂದಿಗಳು, ಮಕ್ಕಳ ರಕ್ಷಣಾ ಘಟಕದ ಪರ್ವತ ರೆಡ್ಡಿ, ಮಕ್ಕಳ ಸಹಾಯವಾಣಿ 1098ನ ಮಹೇಶ ಕುಮಾರ್, ಪೋಲಿಸ್ ಇಲಾಖೆ ಹಾಗೂ ವಿವಿಧ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು