8:01 PM Thursday13 - November 2025
ಬ್ರೇಕಿಂಗ್ ನ್ಯೂಸ್
Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ…

ಇತ್ತೀಚಿನ ಸುದ್ದಿ

ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಗುರು ಪೂರ್ಣಿಮಾ ಉತ್ಸವ: ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಗುರು ಹೋಮ

21/07/2024, 19:43

ಮಂಗಳೂರು(reporterkarnataka.com): ಗುರುಪೂರ್ಣಿಮೆಯು ವ್ಯಕ್ತಿಯೊಳಗಿನ ದೋಷಗಳನ್ನೆಲ್ಲ ಪರಿಹರಿಸಿ ಆತನನ್ನು ಸ್ವಯಂಪೂರ್ಣ ಮತ್ತು ಸರ್ವಾಂಗೀಣ ವ್ಯಕ್ತಿಯಾಗಿ ರೂಪಿಸುವ ದಿವ್ಯದಿನವಾಗಿದೆ. ಗುರು ಮತ್ತು ಗುರಿ ಎರಡೂ ಆತನನ್ನು ಗೊಂದಲರಹಿತನನ್ನಾಗಿ ಮಾಡುತ್ತದೆ ಎಂದು ಮಾತಾ ಅಮೃತಾನಂದಮಯಿ ಮಠದ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರು ಹೇಳಿದರು.
ನಗರದ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಜುಲೈ21 ರಂದು ಭಾನುವಾರ ಗುರು ಪೂರ್ಣಿಮೆಯನ್ನು ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು. ಮಠದ ಮುಖ್ಯಸ್ಥರಾದ ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣರವರು ಆಶೀರ್ವಚನವಿತ್ತು ಇಂದು ಶಾಂತಿ, ಸಮಾಧಾನ ಮತ್ತು ತೃಪ್ತಿಯ ಬದುಕನ್ನು ಬಾಳಬೇಕಾದ ಅಗತ್ಯವಿದೆ. ಇಂದಿನ ಬದುಕಿನ ಅವಶ್ಯಕತೆಯನ್ನು ಮನಗಂಡು ಗುರು ಪೂರ್ಣಿಮೆಯನ್ನು ರೂಪಿಸಿದಂತಿದೆ ಎಂದರು.
ಕಾರ್ಯಕ್ರಮದ ಅಂಗವಾಗಿ ಶ್ರೀಗುರು ಪಾದುಕಾ ಪೂಜೆ, ದೇವೀಪೂಜೆ, ಸರ್ವೈಶ್ವರ್ಯ ಪೂಜೆ, ಆರತಿ, ಭಕ್ತರಿಂದ ಕ್ಷೀರಾಭಿಷೇಕ, ಪ್ರಸಾದ ವಿತರಣೆ ಹಾಗೂ ಮಹಾ ಪ್ರಸಾದ ವಿತರಣೆ ಜರುಗಿತು.
ಗುರು ಪೂರ್ಣಿಮಾ ದಿನದ ಶುಭ ಸಂದರ್ಭದಲ್ಲಿ ಭಾಗವಹಿಸಿದ ಭಕ್ತರ ಹಾಗೂ ಸಮಾಜದ ಸ್ವಾಸ್ಥ್ಯ ಸಂರಕ್ಷಣೆಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ಪೂರ್ವಾಹ್ನ ಬೋಳೂರಿನ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಗುರು ಹೋಮ ಮತ್ತು ಮಹಾ ಮೃತ್ಯುಂಜಯ ಹೋಮ ನೆರವೇರಿಸಲಾಯಿತು.


ಈ ಸಂದರ್ಭದಲ್ಲಿ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಲಕ್ಷ್ಮಣ ಅಮೀನ್ ಮತ್ತು ಪದಾಧಿಕಾರಿಗಳು, ಮಾತಾ ಅಮೃತಾನಂದಮಯಿ ಸೇವಾ ಸಮಿತಿಯ ಪೂರ್ವಾಧ್ಯಕ್ಷ ಡಾ. ಜೀವರಾಜ್ ಸೊರಕೆ, ಅಧ್ಯಕ್ಷ ಡಾ. ವಸಂತಕುಮಾರ ಪೆರ್ಲ, ಉಪಾಧ್ಯಕ್ಷ ಸುರೇಶ್ ಅಮೀನ್, ಕಾರ್ಯದರ್ಶಿ ಡಾ. ಕೆ. ಅಶೋಕ್ ಶೆಣೈ, ಯುವಘಟಕ ಆಯುಧ್ ನ ಪದಾಧಿಕಾರಿಗಳು, ಉಡುಪಿ – ಕುಂದಾಪುರ ಘಟಕಗಳ ಪದಾಧಿಕಾರಿಗಳು, ಸದಸ್ಯರು, ಅಮ್ಮನ ಭಕ್ತರು, ವಿವಿಧ ಜಿಲ್ಲೆಗಳಿಂದ ಆಗಮಿಸಿದ ಭಕ್ತರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು