12:56 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಾತಾ ಅಮೃತಾನಂದಮಯಿ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ: ಬಾಲಲೀಲೆ ಕ್ರೀಡೋತ್ಸವ

08/09/2023, 17:36

ಮಂಗಳೂರು(reporterkarnataka.com): ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಮಧ್ಯಾಹ್ನ ಶ್ರೀ ಕೃಷ್ಣನ ಬಾಲಲೀಲೆಗಳನ್ನು ನೆನಪಿಸುವ ಕ್ರೀಡೋತ್ಸವ, ಮುದ್ದು ಬಾಲಕೃಷ್ಣ, ಮೊಸರು ಕುಡಿಕೆ ಮುಂತಾದ ಕಾರ್ಯಕ್ರಮಗಳು ನೆರೆದಿದ್ದ ಜನಸ್ತೋಮವನ್ನು ರಂಜಿಸಿತು.
ಸಂಜೆ ಸಾಂಸ್ಕೃತಿಕ ಕಲಾ ಪ್ರದರ್ಶನ ಹಾಗೂ ಸ್ಪರ್ಧಾ ಕಾರ್ಯಕ್ರಮವನ್ನು ಗಣ್ಯ ಅತಿಥಿಗಳಾಗಿ ಆಗಮಿಸಿದ ವಿಧಾನ ಪರಿಷತ್ ಸದಸ್ಯರಾದ ತಿಪ್ಪಣಪ್ಪ ಕಮಕನೂರು ಇವರು ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣ ಇವರ ದಿವ್ಯ ಉಪಸ್ಥಿತಿಯಲ್ಲಿ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಅವರು ಈ ಸಂದರ್ಭದಲ್ಲಿ ಮಾತನಾಡಿ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರು ಮನುಕುಲದ ಉದ್ಧಾರಕ್ಕಾಗಿ ಶ್ರಮಿಸುತ್ತಿದ್ದಾರೆ.ಆಧ್ಯಾತ್ಮಿಕ, ಶೈಕ್ಷಣಿಕ, ವೈದ್ಯಕೀಯ ಹಾಗೂ ಸಾಮಾಜಿಕ ಸೇವೆಗಳ ಮೂಲಕ ವಿಶ್ವದಾದ್ಯಂತ ನೆಲೆಸಿರುವ ಅವರ ಶಾಖಾಮಠಗಳು ಸೇವೆ ನೀಡುತ್ತಿದೆ.ಅಮ್ಮನವರೂ ಕೇಂದ್ರ ಸರಕಾರದ ವಿವಿಧ ಸಮಾಜಮುಖಿ ಕಾರ್ಯಕ್ರಮಗಳಿಗೆ ಕೋಟ್ಯಾಂತರ ರೂಪಾಯಿಗಳ ಆರ್ಥಿಕ ನೆರವನ್ನೂ ನೀಡಿರುತ್ತಾರೆ.
ಮಂಗಳೂರಿನ ಈ ಮಠದ ಪರಿಸರ,ಇಲ್ಲಿನ ಶ್ರೀ ಬ್ರಹ್ಮಸ್ಥಾನ ಕ್ಷೇತ್ರ, ಅಮೃತ ವಿದ್ಯಾಲಯಂ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಮ್ಮನ ನಿಸ್ವಾರ್ಥ ಸೇವೆಯಲ್ಲಿ ತಾನೂ ಕಾಣಿಕೆ ನೀಡುವ ಅಭಿಲಾಷೆ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಬಿ.ಕೆ.ಮೋಹನ್ ಕುಮಾರ್ (ಅಧ್ಯಕ್ಷರು ,ಅಖಿಲ ಕರ್ನಾಟಕ ಕೋಲಿ- ಗಂಗಾಮತ ಸಂಘ ,ಬೆಂಗಳೂರು),
ಡಾ.ದೇವಿಪ್ರಸಾದ್ ಹೆಜಮಾಡಿ, ಚೇತನ್ ಬೆಂಗ್ರೆ,ಡಾ.ಕೆ.ಇ.ಪ್ರಕಾಶ್, ಪ್ರೊ. ಡಾ.ಚಾಂದಿನಿ ಎಸ್, ಸೇವಾ ಸಮಿತಿ ಅಧ್ಯಕ್ಷ ಡಾ. ವಸಂತ ಕುಮಾರ ಪೆರ್ಲ, ಉಪಾಧ್ಯಕ್ಷ ಸುರೇಶ್ ಅಮಿನ್, ಯತೀಶ್ ಬೈಕಂಪಾಡಿ, ಜಗದೀಶ್ ಬಂಗೇರ ಬೋಳೂರು ಉಪಸ್ಥಿತರಿದ್ದರು.
ಸಾಂಸ್ಕೃತಿಕ ಕಲಾ ಸ್ಪರ್ಧೆಯಲ್ಲಿ ಮಠದ ಪುರುಷರ ಸೇವಾ ವಿಭಾಗ ಅಮೃತ ಸೇವಕ್ ಪ್ರಥಮ ಬಹುಮಾನ ಪಡೆದರು. ಅಯುಧ್ ಯುವತಿಯರು ದ್ವಿತೀಯ ಹಾಗೂ ಅಯುಧ್ ಯುವಕರು ತೃತೀಯ ಬಹುಮಾನ ಪಡೆದರು.
ಮಧ್ಯರಾತ್ರಿಯ ತನಕ ಭಜನೆ,ಬಾಲಗೋಪಾಲ ಪೂಜೆ, ಆರತಿ ಕಾರ್ಯಕ್ರಮಗಳು ಜರುಗಿದವು.

In the Service of Amma,
Shaila Shetty

ಇತ್ತೀಚಿನ ಸುದ್ದಿ

ಜಾಹೀರಾತು