7:20 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಾತಾ ಅಮೃತಾನಂದಮಯಿ ಮಠಕ್ಕೆ ಮಿಜೋರಂ ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಭೇಟಿ

13/12/2022, 16:15

ಮಂಗಳೂರು(reporter Karnataka.com): ಮಾತಾ ಅಮೃತಾನಂದಮಯಿ ಮಠಕ್ಕೆ ಮಿಜೋರಂ ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಭೇಟಿ ನೀಡಿದರು.
ಮಾತಾ ಅಮೃತಾನಂದಮಯಿ ಸೇವಾ ಸಮಿತಿಯ ಅಧ್ಯಕ್ಷರಾದ ಡಾ.ವಸಂತ ಕುಮಾರ್ ಪೆರ್ಲ ಸ್ವಾಗತಿಸಿದರು. ಮಠದಲ್ಲಿ ಪ್ರತಿ ಭಾನುವಾರ ಸಂಜೆ ನಡೆಯುವ ಶ್ರೀ ಗುರು ಪಾದುಕಾಪೂಜೆ, ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಮಠಾಧಿಪತಿಗಳಾದ ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣರವರು ಮಠದ ವತಿಯಿಂದ ಸನ್ಮಾನಿಸಿದರು. ಅವರು ಮಾತನಾಡಿ ತಮ್ಮ ಜೀವನದಲ್ಲಿ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ ಅನುಗ್ರಹದಿಂದ ಉಂಟಾದ ಸಕಾರಾತ್ಮಕ ಪರಿವರ್ತನೆ ಹಾಗೂ ಅಮ್ಮನವರ ವಿಶ್ವ ವ್ಯಾಪಕವಾದ ಸೇವಾ ಕಾರ್ಯಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅದು ನಮ್ಮ ಅಭಿವೃದ್ಧಿಯಲ್ಲಿ ಮಹತ್ತರವಾದ ಪ್ರೇರಣೆಯಾಗಿದೆ ಎಂದರು.

ಮಂಗಳೂರಿನ ಶ್ರೀ ಬ್ರಹ್ಮಸ್ಥಾನ ಕ್ಷೇತ್ರಕ್ಕೂ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಅಮೃತ ವಿದ್ಯಾಲಯದ ಕ್ಯಾಂಪಸ್ ಡೈರೆಕ್ಟರ್ ಯತೀಶ್ ಬೈಕಂಪಾಡಿ, ಕರ್ನಾಟಕ ಸೆಕ್ಯೂರಿಟೀಸ್ ನ ಅಶೋಕನ್, ರಾಜನ್, ಸುಗುಣನ್, ಡಾ.ದೇವದಾಸ್, ಪ್ರಕಾಶ್ ಠಕ್ಕರ್,ಪ್ರವೀಣ್ ಶಬರೀಶ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು