9:37 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಮಾತಾ ಅಮೃತಾನಂದಮಯಿ ಮಠದಲ್ಲಿ ಸಂಭ್ರಮೋಲ್ಲಾಸದ ಜನ್ಮಾಷ್ಟಮಿ: ಕೃಷ್ಣ ವೇಷ ಸ್ಪರ್ಧೆ

21/08/2022, 01:22

ಮಂಗಳೂರು(reporterkarnataka.com):.ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶ್ರದ್ಧಾ ಭಕ್ತಿ ಹಾಗೂ ಸಂಭ್ರಮೋಲ್ಲಾಸದ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.

ಮಂಗಳೂರಿನ ಶಾಖಾ ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣ ಇವರ‌ ಸಾರಥ್ಯದಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ಬೆಳಗ್ಗೆ ವಿದ್ಯಾರ್ಥಿಗಳಲ್ಲಿ ಭಾರತೀಯ ಸಂಸ್ಕೃತಿಯ ಉನ್ನತ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಚಿತ್ರಕಲಾ ಪ್ರದರ್ಶನ ಹಾಗೂ ಕೃಷ್ಣ ವೇಷ ಸ್ಪರ್ಧೆ ಹಮ್ಮಿಕೊಳ್ಳಲಾಯಿತು.

ಸಂಜೆ  ಶ್ರೀ ಕೃಷ್ಣನ ಬಾಲ ಲೀಲೆಗಳನ್ನು ನೆನಪಿಸುವ ಕ್ರೀಡೋತ್ಸವದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಕ,ಯುವತಿಯರು ಭಾಗವಹಿಸಿ ಸಂತೃಪ್ತಿ ಪಡೆದರು.

ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.

“ಅಯುಧ್”ನವರಿಂದ ಶ್ರೀ ಕೃಷ್ಣ ಹಾಗೂ ಕೃಷ್ಣನ ಉಪದೇಶಗಳ ಬಗ್ಗೆ ರಸಪ್ರಶ್ನೆ , “ಕೃಷ್ಣಾಮೃತ”ಎಂಬ ವಿಶೇಷ ಕಾರ್ಯಕ್ರಮದ ನಂತರ ಬಾಲಗೋಪಾಲ ಪೂಜೆ, ಭಜನೆ, ಆರತಿ, ಹಾಗೂ ಪ್ರಸಾದ ವಿತರಣೆ ಜರುಗಿತು.

ಅಮೃತ ಯುವ ಧರ್ಮ ಧಾರಾ(” ಅಯುಧ್”), ಮಾತಾ ಅಮೃತಾನಂದಮಯಿ ಸೇವಾ ಸಮಿತಿ ಹಾಗೂ ಅಮೃತ ವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ಅಮ್ಮನವರ ಭಕ್ತರು, ಅಮೃತ ವಿದ್ಯಾಲಯದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

ಸೇವಾ ಸಮಿತಿಯ ಅಧ್ಯಕ್ಷ ಡಾ.ವಸಂತ ಕುಮಾರ್ ಪೆರ್ಲ, ಶಾಲಾ ಪ್ರಾಂಶುಪಾಲೆ ಡಾ.ಆರತಿ ಶೆಟ್ಟಿ, ಅಯುಧ್ ಅಧ್ಯಕ್ಷೆ ಮೆಘನಾ ಬಿ ಮತ್ತು ಅಮೃತ ವಿದ್ಯಾಲಯ ನಿರ್ದೇಶಕ ಯತೀಶ್ ಬೈಕಂಪಾಡಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು