5:23 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮದ್ದಳೆ ವಾದಕ ಅಕ್ಷಯ ಆಚಾರ್ ಗೆ ಸೃಷ್ಟಿ ಕಲಾಭೂಷಣ ಪ್ರಶಸ್ತಿ: ಆ. 25ರಂದು ಪ್ರದಾನ

23/08/2024, 13:29

ಬೆಂಗಳೂರು(reporterkarnataka.com): ಸೃಷ್ಟಿ ಕಲಾ ವಿದ್ಯಾಲಯದ 7ನೇ ಯಕ್ಷೋತ್ಸವದ ಅಂಗವಾಗಿ ಮದ್ದಳೆ ವಾದಕ ಅಕ್ಷಯ ಆಚಾರ್ ಬಿದ್ಕಲ್ ಕಟ್ಟೆ ಅವರಿಗೆ ಸೃಷ್ಟಿ ಕಲಾ ಭೂಷಣ ಪ್ರಶಸ್ತಿಯನ್ನು ಆ. 25ರಂದು ಸಂಜೆ 5 ಗಂಟೆಗೆ ಎನ್.ಆರ್.ಕಾಲೊನಿಯ ಅಶ್ವತ್ಥ್ ಕಲಾ ಭವನದಲ್ಲಿ ಪ್ರದಾನ ಮಾಡಲಾಗುವುದು.
ಹಿರಿಯ ಸಾಹಿತಿ ದೊಡ್ಡರಂಗೇ ಗೌಡ, ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ, ಗಾಯಕರಾದ ವಿದ್ಯಾಭೂಷಣ ಮೊದಲಾದ ಗಣ್ಯರಿಗೆ ಈ ಹಿಂದೆ ಈ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಈ ಬಾರಿ ಯುವ ಪ್ರತಿಭಾನ್ವಿತ ಅಕ್ಷಯ ಆಚಾರ್ ಬಿದ್ಕಲ್ ಕಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸೃಷ್ಟಿ ಅಧ್ಯಕ್ಷ ಛಾಯಾಪತಿ ಕಂಚಿಬೈಲು ತಿಳಿಸಿದ್ದಾರೆ.
ಬೆಂಗಳೂರು ಮಾಜಿ ಮೇಯರ್ ಕಟ್ಟೆ ಸತ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸೃಷ್ಟಿ ಗೌರವ ಅಧ್ಯಕ್ಷ ಶ್ರೀಕಾಂತ್ ಎಂ.ಜಿ. ಅಧ್ಯಕ್ಷತೆ ವಹಿಸಲಿದ್ದಾರೆ.
ಸೃಷ್ಟಿ ಯಕ್ಷೋತ್ಸವದಲ್ಲಿ ಅಧ್ವರತ್ರಯ ಯಕ್ಷಗಾನ ಪ್ರದರ್ಶನ ನಡೆಯಲಿದೆ.
*2 ದಿನ ಯಕ್ಷೋತ್ಸವ:*
ಸುಬ್ರಾಯ ಹೆಬ್ಬಾರ್ ಹಾಗೂ ಭರತ್ ರಾಜ್ ಪರ್ಕಳ ಅವರ ನಿರ್ದೇಶನದಲ್ಲಿ, ನಿತ್ಯಾನಂದ ನಾಯಕ್ ಅವರ ವೇಷಭೂಷಣದಲ್ಲಿ
ಆ.24 ಸಂಜೆ 4 ಗಂಟೆಗೆ ದಕ್ಷಾಧ್ವರ ಹಾಗೂ 25 ಆ. ಭಾನುವಾರ ಸಂಜೆ 4 ಗಂಟೆಗೆ ಮಾರಣಾಧ್ವರ ಬಳಿಕ ರಾಜಸೂಯಾಧ್ವರ ಯಕ್ಷಗಾನ ಪ್ರದರ್ಶನ ಸೃಷ್ಟಿ ಕಲಾ ವಿದ್ಯಾಲಯದ ವಿದ್ಯಾರ್ಥಿಗಳಿಂದ ನಡೆಯಲಿದೆ

ಇತ್ತೀಚಿನ ಸುದ್ದಿ

ಜಾಹೀರಾತು