ಇತ್ತೀಚಿನ ಸುದ್ದಿ
ಸಚಿವ ಮಾಧುಸ್ವಾಮಿ ಇಂದು ಮಂಗಳೂರಿಗೆ: ಸಣ್ಣ ನೀರಾವರಿ, ಅಂತರ್ಜಲ ಅಭಿವೃದ್ಧಿ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆ
03/07/2021, 08:16
ಮಂಗಳೂರು (reporterkarnataka news): ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಜುಲೈ 3ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
3ರ ಬೆಳಿಗ್ಗೆ 7 ಗಂಟೆಗೆ ಚಿಕ್ಕನಾಯಕಹಳ್ಳಿಯಿಂದ ರಸ್ತೆ ಮಾರ್ಗವಾಗಿ ಹೊರಟು ಮಧ್ಯಾಹ್ನ 12 ಗಂಟೆಗೆ ಮಂಗಳೂರಿನ ಸಕ್ಯೂರ್ಟ್ ಹೌಸ್‍ಗೆ ಆಗಮಿಸುವರು. ಮಧ್ಯಾಹ್ನ 1.30ಕ್ಕೆ ಮಂಗಳೂರು ಉಪವಿಭಾಗದ ಕಾಮಗಾರಿಗಳನ್ನು ಪರಿವೀಕ್ಷಣೆ ಮಾಡುವರು. ಸಂಜೆ 5 ಗಂಟೆಗೆ ಸಕ್ರ್ಯೂಟ್ ಹೌಸ್‍ನಲ್ಲಿ ಮಂಗಳೂರು ವ್ಯಾಪ್ತಿಯ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ವಿಭಾಗದ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.