12:01 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಮಧುರ ನಗರಿ ಮಂಡ್ಯದಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ: ದಳಪತಿಗಳ ನಾಡಿನಲ್ಲಿ ಭಾರಿ ಜನಬೆಂಬಲ

12/03/2023, 17:35

ಸಪ್ನಾ ದಿನಕರ್ ಮದ್ದೂರು ಮಂಡ್ಯ

info.reporterkarnataka@gmail.com

ಮುಂಬರುವ ವಿಧಾನ ಸಭೆ ಚುನಾವಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಭರ್ಜರಿ ರೋಡ್ ಶೋ ಸಕ್ಕರೆ ನಾಡು ಮಂಡ್ಯದಲ್ಲಿ ಭಾನುವಾರ ನಡೆಯಿತು. ಮಂಡ್ಯ ಜಿಲ್ಲೆಗೆ ಮೋದಿ ಅವರ ಮೊದಲ ಭೇಟಿ ಇದಾಗಿದೆ.

ದಳಪತಿಗಳ ನಾಡಿನಲ್ಲಿ ಬಿಜೆಪಿಯ ನರೇಂದ್ರ ಮೋದಿ ಅವರಿಗೆ ಭಾರೀ ಜನಸ್ತೋಮದೊಂದಿಗೆ ಸ್ವಾಗತಿಸಲಾಯಿತು. ರಾಜಕೀಯವಾಗಿ ಬಿಜೆಪಿ ಅಷ್ಟೇನು ಪ್ರಾಬಲ್ಯ ಹೊಂದದ ಮಂಡ್ಯದಲ್ಲಿ ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಅವರನ್ನು ಸ್ವಾಗತಿಸಲು ರಸ್ತೆಯ ಇಕ್ಕೆಲಗಳಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು.
ಮಂಡ್ಯದ ಪ್ರವಾಸಿ ಮಂದಿರ ಸರ್ಕಲ್​ನಿಂದ ಪ್ರಧಾನಿ ನರೇಂದ್ರ ಮೋದಿ ರೋಡ್‌ ಶೋ
ಪ್ರವಾಸಿ ಮಂದಿರ ವೃತ್ತದಿಂದ ಆರಂಭವಾಯಿತು. ಸುಮಾರು 2 ಕಿಮೀ. ಉದ್ದಕ್ಕೆ ರೋಡ್ ಶೋ ನಡೆದ ಬಳಿಕ ನಂದಾ ಸರ್ಕಲ್‌ ನಲ್ಲಿ ಮುಕ್ತಾಯವಾಯಿತು.


ರಸ್ತೆಯ ಎರಡೂ ಬದಿಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು, ಅಭಿಮಾನಿಗಳು ಪ್ರಧಾನಿ ಮೇಲೆ ಹೂವಿನ ಸುರಿಮಳೆಗೈದಿದ್ದಾರೆ. ಪ್ರತಿಯಾಗಿ ಪ್ರಧಾನಿ ಮೋದಿ ಅವರು ಕಾರಿನ ಮೇಲೆ ಬಿದ್ದ ಹೂವನ್ನು ತನ್ನ ಅಭಿಮಾನಿಗಳತ್ತ ಎಸೆದಿದ್ದಾರೆ.
ಮಾರ್ಗಮಧ್ಯೆ ಕಾರು ನಿಲ್ಲಿಸಿ ಮೋದಿ ಜನರತ್ತ ಕೈಬೀಸಿದ್ದಾರೆ.
ಮಂಡ್ಯ ನಗರ ಕೇಸರಿಮಯವಾಗಿ ಬದಲಾಗಿತ್ತು. ಮಂಡ್ಯದ ಎಲ್ಲಾ ರಸ್ತೆಗಳಲ್ಲೂ ಬಿಜೆಪಿ ಬಾವುಟ, ಬ್ಯಾನರ್ ಹಾಗೂ ಬಂಟಿಂಗ್ಸ್​ ರಾರಾಜಿಸುತ್ತಿತ್ತು. ರೋಡ್ ಶೋಗಾಗಿ ಹೆದ್ದಾರಿ ಬದಿಗೆ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿತ್ತು.

ರೋಡ್​ ಶೋ ವೇಳೆ ಕಾರ್ಯಕರ್ತರು ಮೋದಿ…ಮೋದಿ…ಮೋದಿ ಎಂದು ಜೈಕಾರ ಕೂಗುವುದು ಮುಗಿಲು ಮುಟ್ಟಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು