ಇತ್ತೀಚಿನ ಸುದ್ದಿ
ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ ಸ್ಪಷ್ಟನೆ; ಪ್ರತಿಭಟನೆ ಕೈಬಿಡಲು ಮನವಿ
25/09/2026, 18:25
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಮಡಿಕೇರಿ ಮತ್ತು ಕುಶಾಲನಗರ ತಾಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಲು ಕೇಂದ್ರ ಸರ್ಕಾರದ ಮಾನದಂಡದ ಅಡಿಯಲ್ಲಿ ಎಲ್ಲಾ ಅರ್ಹತೆಗಳಿದ್ದು, ಈ ಕುರಿತು ರಾಜ್ಯ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ.
ರೈತರ ಸಂಕಷ್ಟದ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಬರಪೀಡಿತ ಘೋಷಣೆಗೆ ಅಗತ್ಯವಿರುವ ಎಲ್ಲಾ ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ. ಆದ್ದರಿಂದ ಬಿಜೆಪಿಯವರು ನಡೆಸುತ್ತಿರುವ ಪ್ರತಿಭಟನೆಯನ್ನು ಕೈಬಿಡಬೇಕು ಎಂದು ಮನವಿ ಮಾಡಿದರು.
ಅಲ್ಲದೆ, “ಬಿಜೆಪಿ ಪ್ರತಿಭಟನೆ ಮಾಡಿದ ಮಾತ್ರಕ್ಕೆ ಮಳೆ ಬರಲು ಸಾಧ್ಯವೇ? ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುವ ಬದಲು ರೈತರಿಗೆ ನೆರವಾಗಲು ಕೇಂದ್ರದಿಂದ ಪರಿಹಾರ ತರಲು ಬಿಜೆಪಿ ಮುಖಂಡರು ಪ್ರಯತ್ನಿಸಲಿ” ಎಂದು ಅವರು ಟಾಂಗ್ ನೀಡಿದರು.
ತಾಲೂಕಿನ ರೈತರಿಗೆ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ಶಾಸಕರು ಭರವಸೆ ನೀಡಿದರು.












