3:18 PM Friday25 - September 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ…

ಇತ್ತೀಚಿನ ಸುದ್ದಿ

ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ ಸ್ಪಷ್ಟನೆ; ಪ್ರತಿಭಟನೆ ಕೈಬಿಡಲು ಮನವಿ

25/09/2026, 14:27

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ಮತ್ತು ಕುಶಾಲನಗರ ತಾಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಲು ಕೇಂದ್ರ ಸರ್ಕಾರದ ಮಾನದಂಡದ ಅಡಿಯಲ್ಲಿ ಎಲ್ಲಾ ಅರ್ಹತೆಗಳಿದ್ದು, ಈ ಕುರಿತು ರಾಜ್ಯ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ.
ರೈತರ ಸಂಕಷ್ಟದ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಬರಪೀಡಿತ ಘೋಷಣೆಗೆ ಅಗತ್ಯವಿರುವ ಎಲ್ಲಾ ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ. ಆದ್ದರಿಂದ ಬಿಜೆಪಿಯವರು ನಡೆಸುತ್ತಿರುವ ಪ್ರತಿಭಟನೆಯನ್ನು ಕೈಬಿಡಬೇಕು ಎಂದು ಮನವಿ ಮಾಡಿದರು.
ಅಲ್ಲದೆ, “ಬಿಜೆಪಿ ಪ್ರತಿಭಟನೆ ಮಾಡಿದ ಮಾತ್ರಕ್ಕೆ ಮಳೆ ಬರಲು ಸಾಧ್ಯವೇ? ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುವ ಬದಲು ರೈತರಿಗೆ ನೆರವಾಗಲು ಕೇಂದ್ರದಿಂದ ಪರಿಹಾರ ತರಲು ಬಿಜೆಪಿ ಮುಖಂಡರು ಪ್ರಯತ್ನಿಸಲಿ” ಎಂದು ಅವರು ಟಾಂಗ್ ನೀಡಿದರು.
ತಾಲೂಕಿನ ರೈತರಿಗೆ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ಶಾಸಕರು ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು