11:33 AM Friday21 - November 2025
ಬ್ರೇಕಿಂಗ್ ನ್ಯೂಸ್
ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ…

ಇತ್ತೀಚಿನ ಸುದ್ದಿ

ಮಡಿಕೇರಿ: ಅಖಿಲ ಭಾರತ 72 ನೇ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ

21/11/2025, 11:11

ಮಡಿಕೇರಿ(reporterkarnataka.com): ಸಹಕಾರ ಸಂಘಗಳ ಬೆಳವಣಿಗೆ ರಾಷ್ಟ್ರದ ಅಭಿವೃದ್ಧಿಗೆ ಸಹಕಾರಿಯಾಗಿದ್ದು, ಸಹಕಾರ ಸಂಘಗಳ ಕೊಡುಗೆ ಅಪಾರವಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ ಅವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ, ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಹಾಗೂ ಸ್ಥಳೀಯ ಎಲ್ಲಾ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ‘ಉನ್ನತಿ’ ಭವನದ ಪಂದ್ಯಂಡ ಐ.ಬೆಳ್ಯಪ್ಪ ಸ್ಮಾರಕ ಸಭಾಂಗಣದಲ್ಲಿ ನಡೆದ ಅಖಿಲ ಭಾರತ 72ನೇ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದ ಅಂಗವಾಗಿ ‘ಜಾಗತಿಕ ಸ್ಪರ್ಧಾತ್ಮಕತೆಗಾಗಿ ನವನಾವಿನ್ಯತೆಯ ಸಹಕಾರಿ ವ್ಯವಹಾರದ ಮಾದರಿಗಳು’ ದಿನಾಚರಣೆ ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನಿಂದ ಆಯ್ಕೆಗೊಂಡ ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರೈತರ ಬದುಕಿಗೆ ಸಹಕಾರ ಸಂಘಗಳು ಬೆನ್ನುಲುಬಾಗಿದ್ದು, ಕೃಷಿ ಚಟುವಟಿಕೆಯನ್ನು ಕೈಗೊಳ್ಳಲು ಸಹಕಾರ ಸಂಘಗಳು ಸಹಕಾರಿಯಾಗಿವೆ ಎಂದು ಸುಜಾ ಕುಶಾಲಪ್ಪ ಅವರು ನುಡಿದರು.
ರಾಷ್ಟ್ರವು ಇಂದಿಗೂ ಸಹ ಕೃಷಿ ಪ್ರಧಾನವಾಗಿದ್ದು, ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಆ ನಿಟ್ಟಿನಲ್ಲಿ ಕೃಷಿಗೆ ಪೂರಕವಾಗಿ ಸಹಕಾರ ಸಂಘಗಳು ಕಾರ್ಯ ನಿರ್ವಹಿಸುತ್ತಿವೆ ಎಂದರು.
ಕೃಷಿ, ತೋಟಗಾರಿಕೆ, ಹಾಲು ಉತ್ಪಾದನೆ, ಸಕ್ಕರೆ, ಗೃಹ ನಿರ್ಮಾಣ, ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಹಕಾರ ಸಂಘಗಳು ರೈತರಿಗೆ ಅನುಕೂಲವಾಗಿರುವುದು ವಿಶೇಷವಾಗಿದೆ ಎಂದು ಸುಜಾ ಕುಶಾಲಪ್ಪ ಅವರು ತಿಳಿಸಿದರು. ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರಿಗೂ ಸಾಲ ಸೌಲಭ್ಯ ಹಾಗೂ ಶೈಕ್ಷಣಿಕ ಸೌಲಭ್ಯ ಕಲ್ಪಿಸುವಲ್ಲಿ ಸಹಕಾರ ಕ್ಷೇತ್ರ ಇಂದಿಗೂ ಸಹ ಕೈಜೋಡಿಸಿವೆ ಎಂದು ವಿಧಾನ ಪರಿಷತ್ ಸದಸ್ಯರು ಹೇಳಿದರು.
ಕೃಷಿಕರು ಸಹಕಾರ ಬ್ಯಾಂಕ್‍ನಲ್ಲಿ ಸುಲಭವಾಗಿ ಸಾಲ ಪಡೆದು ರೈತ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬಹುದಾಗಿದೆ. ಪಡೆದ ಸಾಲವನ್ನು ಸಕಾಲದಲ್ಲಿ ಪಾವತಿಸುತ್ತಿರುವುದು ಸಹ ಕೊಡಗು ಜಿಲ್ಲೆಯ ವಿಶೇಷವಾಗಿದೆ ಎಂದರು. ಕೊಡಗು ಜಿಲ್ಲೆ ಸಹಕಾರ ಕ್ಷೇತ್ರ ಮಾದರಿಯಾಗಿದ್ದು, ಕೃಷಿಕರು ಮತ್ತು ಸಹಕಾರ ಕ್ಷೇತ್ರ ನಡುವೆ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರು ನುಡಿದರು.
ಕೊಡಗು ಜಿಲ್ಲೆಯಲ್ಲಿ ಸಹಕಾರ ಸಂಘಗಳ ಬಲವರ್ಧನೆಗೆ ಹಿರಿಯರ ಶ್ರಮ ಹೆಚ್ಚಿನದ್ದಾಗಿದೆ. ಸಹಕಾರ ಸಂಘಗಳು ಕೊಡಗು ಜಿಲ್ಲೆಯಲ್ಲಿ ಉತ್ತಮವಾಗಿ ನಡೆಯುತ್ತಿರುವುದು ಮೆಚ್ಚಲೇಬೇಕು. ಇದರಿಂದ ಮುಂದಿನ ಪೀಳಿಗೆಗೆ ಸಹಕಾರಿಯಾಗಲಿದೆ ಎಂದು ಸುಜಾ ಕುಶಾಲಪ್ಪ ಅವರು ವಿವರಿಸಿದರು.
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಅಧ್ಯಕ್ಷರಾದ ಕೊಡಂದೇರ ಪಿ.ಗಣಪತಿ ಅವರು ಮಾತನಾಡಿ ಸಹಕಾರ ಸಂಘಗಳ ಬ್ಯಾಂಕ್‍ನಲ್ಲಿ ಏಕರೂಪದ ತಂತ್ರಾಂಶ ಅಳವಡಿಸಿಕೊಳ್ಳಲಾಗಿದೆ. ಜತೆಗೆ ರಾಷ್ಟ್ರೀಕೃತ ಬ್ಯಾಂಕ್ ಮಾದರಿಯಲ್ಲಿ ಸಹಕಾರ ಬ್ಯಾಂಕ್‍ಗಳಲ್ಲಿಯೂ ಸಹ ಡಿಜಿಟಲೀಕರಣಕ್ಕೆ ಮುಂದಾಗಲಾಗಿದೆ ಎಂದರು. ನಬಾರ್ಡ್ ಪ್ರಾಯೋಜಕತ್ವದಲ್ಲಿ ಸಹಕಾರ ಬ್ಯಾಂಕ್‍ನ್ನು ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡಲಾಗುತ್ತದೆ. ಸಹಕಾರ ಬ್ಯಾಂಕ್‍ಗಳಲ್ಲಿ ಪಾರದರ್ಶಕತೆ ಅಳವಡಿಸಿಕೊಂಡು ಬ್ಯಾಂಕುಗಳನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷರು ವಿವರಿಸಿದರು.
ಸಹಕಾರ ಬ್ಯಾಂಕುಗಳನ್ನು ಅಭಿವೃದ್ಧಿ ಪಡಿಸುವಲ್ಲಿ ಕರ್ನಾಟಕ, ಮಹಾರಾಷ್ಟ್ರ ಮತ್ತಿತರ ರಾಜ್ಯಗಳಲ್ಲಿ ಪೈಲೆಟ್ ಯೋಜನೆ ರೂಪಿಸಲಾಗಿದೆ ಎಂದು ಬಾಂಡ್ ಗಣಪತಿ ಅವರು ತಿಳಿಸಿದರು.
ಸಹಕಾರ ಕ್ಷೇತ್ರದಲ್ಲಿ ಪೆಟ್ರೋಲ್ ಬಂಕ್, ಆಸ್ಪತ್ರೆ, ಕಲ್ಯಾಣ ಮಂಟಪ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಸಹಕಾರ ಸಂಘ ಹೆಜ್ಜೆ ಹಾಕಿರುವುದು ಶ್ಲಾಘನೀಯವಾಗಿದೆ. ಕೊಡಗು ಜಿಲ್ಲೆಯಲ್ಲಿಯೂ ಸಹ ಬಹು ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದು ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಸಹಕಾರ ಸಂಘ ವ್ಯಾಪ್ತಿಯಲ್ಲಿರುವ ಭೂಮಿಯನ್ನು ಸಂರಕ್ಷಣೆ ಮಾಡಿಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದು ಬಾಂಡ್ ಗಣಪತಿ ಅವರು ವಿವರಿಸಿದರು.
ಜಿಲ್ಲೆಯಲ್ಲಿ ಸಹಕಾರ ಸಂಘಗಳು ಸ್ವಂತ ಬಂಡವಾಳ ಹೊಂದಿದ್ದು, ರಾಷ್ಟ್ರೀಕೃತ ಬ್ಯಾಂಕ್ ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತವೆ ಎಂದು ತಿಳಿಸಿದರು.
ಕೊಡಗು ಡಿಸಿಸಿ ಬ್ಯಾಂಕ್ 24 ಶಾಖೆಗಳನ್ನು ಹೊಂದಿದ್ದು, ಉಳಿದಂತೆ ತಿತಿಮತಿ, ಕಕ್ಕಬ್ಬೆ, ಗುಡ್ಡೆಹೊಸೂರು ಮತ್ತಿತರ ಕಡೆಗಳಲ್ಲಿ ಡಿಸಿಸಿ ಬ್ಯಾಂಕ್ ಶಾಖೆಗಳನ್ನು ಆರಂಭಿಸಲಾಗುತ್ತದೆ. ಇದರಿಂದ ರೈತರಿಗೆ ಸಾಲ ಸೌಲಭ್ಯ ಪಡೆಯಲು ಸಹಕಾರಿಯಾಗಲಿದೆ ಎಂದು ಕೊಡಂದೇರ ಗಣಪತಿ ಅವರು ಹೇಳಿದರು.
ಕೊಡಗು ಜಿಲ್ಲೆಯ ಸಹಕಾರ ಕ್ಷೇತ್ರದ ದೊಡ್ಡಯ್ಯ ಅವರ ಭಾವಚಿತ್ರವನ್ನು ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳ ಕಚೇರಿಯಲ್ಲಿ ಅಳವಡಿಸಲು ಇದೇ ಸಂದರ್ಭದಲ್ಲಿ ಕರೆ ನೀಡಿದರು.
ಇದೇ ಡಿಸೆಂಬರ್, 7 ರಿಂದ 5 ದಿನಗಳ ಕಾಲ ಕೃಷಿ ಪತ್ತಿನ ಸಹಕಾರ ಸಂಘ ತರಬೇತಿ ಕಾರ್ಯಾಗಾರವು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಪಂದ್ಯಂಡ ಬೆಳ್ಯಪ್ಪ ಸಭಾಂಗಣದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಅಧ್ಯಕ್ಷರಾದ ರಾಬಿನ್ ದೇವಯ್ಯ ಅವರು ಮಾತನಾಡಿ ಒಂದು ವಾರಗಳ ಕಾಲ ವಿವಿಧ ಕಡೆಗಳಲ್ಲಿ ಸಹಕಾರಿಗಳ ಸಹಕಾರದಿಂದ ಸಹಕಾರ ಸಪ್ತಾಹ ನಡೆದಿರುವುದು ವಿಶೇಷವಾಗಿದೆ ಎಂದರು.
ಕೊಡಗು ಸಹಕಾರ ರತ್ನ ಪ್ರಶಸ್ತಿ ಪಡೆದ ಹಿರಿಯ ಸಹಕಾರಿ ಚಿರಿಯಪಂಡ ಕೆ.ಉತ್ತಪ್ಪ ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ನಿರ್ದೇಶಕರಾದ ಎಂ.ಎಂ.ಶ್ಯಾಮಲಾ ಅವರು ಮಾತನಾಡಿದರು.
ಶ್ರೇಷ್ಠ ಸಹಕಾರಿಗಳಾದ ಎಚ್.ಎಸ್.ಮುದ್ದಪ್ಪ, ತಳೂರು ಕಿಶೋರ್ ಕುಮಾರ್, ಶ್ರೇಷ್ಠ ಮಹಿಳಾ ಸಹಕಾರಿ ದೇವಾಂಬಿಕಾ ಮಹೇಶ್, ಉತ್ತಮ ಸಹಕಾರಿ ಸಿಬ್ಬಂದಿ ಆಲೆಮಾಡ ಎಸ್.ಕಾವೇರಮ್ಮ ಅವರಿಗೆ ಇದೇ ಸಂದರ್ಭದಲ್ಲಿ ಶಾಲೂ, ಫಲ ತಾಂಬೂಲ ನೀಡಿ ಸನ್ಮಾನಿಸಲಾಯಿತು.
ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ನಿರ್ದೇಶಕರಾದ ಎಚ್.ಕೆ.ಮಾದಪ್ಪ, ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಉಪಾಧ್ಯಕ್ಷರಾದ ಕೆ.ಹರೀಶ್ ಪೂವಯ್ಯ, ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ನಿರ್ದೇಶಕರಾದ ಮನುಮುತ್ತಪ್ಪ, ಕೆ.ಎಂ.ತಮ್ಮಯ್ಯ, ಅಜಯ್ ಕುಮಾರ್, ಶ್ಯಾಮಚಂದ್ರ, ಕೆ.ಟಿ.ಪರಮೇಶ್, ಬಲ್ಲಾರಂಡ ಮಣಿಉತ್ತಪ್ಪ, ಅಮೃತ್ ವಿ.ಸಿ., ಎಸ್.ಆರ್.ಸುನೀಲ್ ರಾವ್, ಎ.ಸಿ.ಕುಶಾಲಪ್ಪ, ಎಂ.ಟಿ.ಸುಬ್ಬಯ್ಯ, ಎ.ಎಂ.ಮುತ್ತಪ್ಪ, ಪಿ.ಎಂ.ಚಂದ್ರಪ್ರಕಾಶ್, ಎಚ್.ಎಂ.ರಮೇಶ್,
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ನಿರ್ದೇಶಕರಾದ ಹೊಸೂರು ಸತೀಶ್ ಕುಮಾರ್, ಕಾಂಗೀರ ಸತೀಶ್, ಅರುಣ್ ಭೀಮಯ್ಯ, ಪಿ.ಪಿ.ಪೆಮ್ಮಯ್ಯ, ಕಿಲನ್ ಗಣಪತಿ, ಶರತ್ ಶೇಖರ್, ನಾಪಂಡ ಉಮೇಶ್ ಉತ್ತಪ್ಪ, ಪಟ್ರಪಂಡ ರಘುನಾಣಯ್ಯ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ವೃತ್ತಿಪರ ನಿರ್ದೇಶಕರಾದ ಮುಂಡಂಡ ಸಿ.ನಾಣಯ್ಯ, ಎ.ಗೋಪಾಲಕೃಷ್ಣ, ಸಹಕಾರ ಸಂಘಗಳ ಉಪ ನಿಬಂಧಕರಾದ ಎಚ್.ಡಿ.ರವಿಕುಮಾರ್, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಉಪ ನಿರ್ದೇಶಕರಾದ ಎಂ.ಎನ್.ಹೇಮಾವತಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶೈಲಜಾ, ಇತರರು ಇದ್ದರು.
ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷರು ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಚ್.ಕೆ.ಮಾದಪ್ಪ ಸ್ವಾಗತಿಸಿದರು. ಮಂಜುಳ ಪ್ರಾರ್ಥಿಸಿದರು. ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಸಿಇಒ ಯೋಗೇಂದ್ರ ನಾಯಕ್ ನಿರೂಪಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು