3:02 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಮಡಿಕೇರಿ: ಗೃಹ ಸಚಿವ ಹಾಗೂ ಸಿ.ಟಿ. ರವಿ ವಿರುದ್ಧ ಪ್ರತಿಭಟನೆ: ದೂರು ದಾಖಲು

08/04/2022, 23:31

ಮಡಿಕೇರಿ(reporterkarnataka.com): ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ  ಅವರ ಕೋಮು ಪ್ರಚೋದನೆ ಹೇಳಿಕೆಯನ್ನು ಖಂಡಿಸಿ ಅವರನ್ನು ಬಂಧಿಸಬೇಕೆಂದು ಬೇಡಿಕೆಯೊಂದಿಗೆ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ ಇಂದು ಮಡಿಕೇರಿ ನಗರ ಠಾಣೆ ಎದುರು ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ. ನಡೆಸಲಾಯಿತು.

 ಗೃಹ ಸಚಿವ, ಸಿಟಿ ರವಿ  ಹಾಗೂ ಬಿಜೆಪಿ ಸರಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಕಾರರು ಕೂಡಲೇ ಅವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಬಳಿಕ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಮಡಿಕೇರಿ ನಗರ ಆರಕ್ಷಕ ಠಾಣೆಗೆ ತೆರಳಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕೋಮು ಪ್ರಚೋದನೆ ಹೇಳಿಕೆ ನೀಡಿದ ಇವರ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದರು. ಕೆಪಿಸಿಸಿ ಮಾಧ್ಯಮ ಸಂವಹನ ವಕ್ತಾರ ಟಿ.ಪಿ. ರಮೇಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಕೆ.ಪಿ. ಚಂದ್ರಕಲಾ, ಡಿಸಿಸಿ ಉಪಾಧ್ಯಕ್ಷ ಸುಜು ತಿಮ್ಮಯ್ಯ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್, ಡಿಸಿಸಿ ಗೌರವ ಕಾರ್ಯದರ್ಶಿ ವಿ.ಪಿ. ಸುರೇಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ  ಸುರಯ್ಯ ಅಬ್ರಾರ್, NSUI ಜಿಲ್ಲಾಧ್ಯಕ್ಷ ರೋಷನ್, ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಉಸ್ಮಾನ್, ಮಾಜಿ ಸೈನಿಕರ ಘಟಕದ ಜಿಲ್ಲಾಧ್ಯಕ್ಷ ಗಣೇಶ್, RGPRS ಜಿಲ್ಲಾ ಸಂಚಾಲಕ ತೆನ್ನೀರ ಮೈನ, ಕಾನೂನು ಘಟಕದ ಜಿಲ್ಲಾಧ್ಯಕ್ಷರಾದ ಶ್ರೀಧರನ್ ನಾಯರ್, ಫ್ಯಾನ್ಸಿ ಪಾರ್ವತಿ, ಯಾಕೋಬ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಾಲಕೃಷ್ಣ, ಸಂಪಾಜೆ, ವಲಯ ಕಾಂಗ್ರೆಸ್ ಅಧ್ಯಕ್ಷ ಪಿ.ಎಲ್. ಸುರೇಶ್, ನಗರಸಭೆ ಮಾಜಿ ಸದಸ್ಯ ಪ್ರಕಾಶ್ ಆಚಾರ್ಯ, ಡಿಸಿಸಿ ಸದಸ್ಯರ ಲಿಯಾಕತ್ ಆಲಿ, ನಗರಸಭೆ ಮಾಜಿ ಸದಸ್ಯರಾದ ಉದಯಕುಮಾರ್ ಹಾಗೂ ವೆಂಕಟೇಶ್, ಸಾಮಾಜಿಕ ಜಾಲತಾಣದ ಬೋಪಣ್ಣ ಹಾಗೂ ಎನ್.ಜಿ ಅಯ್ಯಪ್ಪ, ಡಿಸಿಸಿ ಸದಸ್ಯರಾದ ಕೇಟೊಳಿ ಮೋಹನ್ರಾಜ್, ಬೆಟಗೇರಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ನಾಪಂಡ ಗಣೇಶ್, ಪುಲಿಯಂಡ ಜಗದೀಶ್, ವಾಸು ಕೊಯಿನಾಡು, ಮುನೀರ್ ಮಾಚರ್, ಡಿಸಿಸಿ ಸದಸ್ಯರಾದ ಅಬ್ದುಲ್ ರಜಾಕ್, ಪುಷ್ಪ ಪೂಣಚ್ಚ, ಕೆಎ ಆನಂದ್, ಸೈಮನ್ ಮೊದಲಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು