ಇತ್ತೀಚಿನ ಸುದ್ದಿ
ಮಡಿಕೇರಿ: ಭಾರೀ ಮಳೆಗೆ ಜಿಲ್ಲಾಧಿಕಾರಿ ಕಚೇರಿ ಸಮೀಪದ ಬೃಹತ್ ತಡೆಗೋಡೆಯಲ್ಲಿ ಬಿರುಕು
31/07/2025, 22:55

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಭಾರೀ ಮಳೆಯಿಂದಾಗಿ ಮಡಿಕೇರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಕೆಳಭಾಗದ ರಾಷ್ಟ್ರೀಯ ಹೆದ್ದಾರಿ ಬದಿಯ ಬೃಹತ್ ತಡೆಗೋಡೆಯಲ್ಲಿ ಬಿರುಕು ಬಿಟ್ಟಿದೆ.
ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುರಕ್ಷತಾಕ್ರಮವಾಗಿ ರಸ್ತೆಯ ಕೆಳಭಾಗದಲ್ಲಿ ನೆಲೆಸಿರುವ ನಿವಾಸಿಗಳನ್ನು ರೆಡ್ ಕ್ರಾಸ್ ಸಂಸ್ಥೆಯ ಭವನಕ್ಕೆ ಸ್ಥಳಾಂತರಿಸಲಾಗಿದೆ.
ಪೊಲೀಸರು ಸ್ಥಳದಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ವಾಹನಗಳ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಕ್ರಮ ಕೈಗೊಂಡಿದ್ದಾರೆ.