8:48 PM Friday25 - July 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ ಐಟಿಯಿಂದ ಹಿರಿಯ ಐಪಿಎಸ್ ಅಧಿಕಾರಿ ಸೌಮ್ಯಲತಾ… ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ: ಕೊಲೆ ಶಂಕೆ; ಕುಟುಂಬಸ್ಥರಿಂದ ದೂರು ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಮಡಿಕೇರಿ: ಹುಲಿ ದಾಳಿಗೆ ಕರಿಮೆಣಸು ಕೊಯ್ಯಲು ಬಂದಿದ್ದ ಕಾರ್ಮಿಕ ಸಾವು

28/03/2022, 23:26

ಮಡಿಕೇರಿ(reporterkarnataka.com): ಹುಲಿ ದಾಳಿಗೆ ಕಾರ್ಮಿಕರೊಬ್ಬರು ಬಲಿಯಾಗಿರುವ ಘಟನೆ ದಕ್ಷಿಣ ಕೊಡಗಿನ ವಿ.ಬಾಡಗ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಮೃತರನ್ನು ಗದ್ದೆಮನೆ ನಿವಾಸಿ ಗಣೇಶ್ (29) ಎಂದು ಗುರುತಿಸಲಾಗಿದೆ. ವಿ.ಬಾಡಗ ಸಮೀಪದ‌ ಒಂದನೇ ರುದ್ರಗುಪ್ಪೆಯ ಕೊಂಗಂಡ ಅಯ್ಯಪ್ಪ ಅವರ ತೋಟದಲ್ಲಿ ಕರಿಮೆಣಸು ಕೊಯ್ಯುವ ಕೆಲಸಕ್ಕೆ ಬಂದಿದ್ದ ಗಣೇಶ್ ಮೇಲೆ ಹುಲಿ ದಾಳಿ ನಡೆಸಿದೆ. ಈ ಸಂದರ್ಭ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಕಳೆದ‌10 ದಿನಗಳ ಹಿಂದೆ ಇದೇ ಪ್ರದೇಶದಲ್ಲಿ ಅಟ್ರಂಗಡ ಸುಬ್ಬಯ್ಯ ಅವರ ಕರುವನ್ನು ಹುಲಿ ಬಲಿ ಪಡೆದುಕೊಂಡಿತ್ತು. ವಿಷಯ ತಿಳಿದ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದ್ದು, ಹುಲಿಯನ್ನು ಸೆರೆ ಹಿಡಿಯದೆ ಮೃತದೇಹವನ್ನು ತೆಗೆಯಲು ಅವಕಾಣಸ ನೀಡುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ಅಲ್ಲದೆ ಹುಲಿಗೆ ಕಂಡಲ್ಲಿ ಗುಂಡಿಕ್ಕಲು ಅವಕಾಶ‌ ನೀಡುವಂತೆ ಅರಣ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು