ಇತ್ತೀಚಿನ ಸುದ್ದಿ
Madikeri | ಪ್ರಧಾನಿಗೆ ಅವಹೇಳನ ಪ್ರಕರಣ: ಆರೋಪಿಗಳ ಗಡಿಪಾರು ಆಗ್ರಹಿಸಿ ಬಿಜೆಪಿ ಪ್ರತಿಭಟನೆ
11/12/2025, 15:28
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವಹೇಳನ ಮಾಡಿದ ಪ್ರಕರಣ ಸಂಬಂಧಿಸಿದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸಿತು.
ಮಾಜಿ ಶಾಸಕರಾದ ಅಪ್ಪಚ್ಚು ರಂಜನ್, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ, ನಗರಸಭೆ ಅಧ್ಯಕ್ಷೆ ಕಲಾವತಿ. ಉಪಾಧ್ಯಕ್ಷ ಮಹೇಶ್ ಜೈನಿ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅನಿತಾ ಪೂವಯ್ಯ ಸೇರಿದಂತೆ ಅನೇಕ ಪ್ರಮುಖರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.



ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ, ನಾಲ್ವರು ಆರೋಪಿಗಳನ್ನು ಕೊಡಗಿನಿಂದ ಗಡಿ ಪಾರು ಮಾಡುವಂತೆ ಪ್ರಮುಖರ ಒತ್ತಾಯಿಸಿದರು.
ಮಾನವ ಸರಪಳಿ ರಚಿಸಿ ಮಡಿಕೇರಿ ಇಂದಿರಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.












