ಇತ್ತೀಚಿನ ಸುದ್ದಿ
ಮಡಿಕೇರಿ | ಕಂದಕಕ್ಕೆ ಉರುಳಿದ ಕಾರ್ಮಿಕರ ಸಾಗಿಸುತ್ತಿದ್ದ ಜೀಪ್: ವ್ಯಕ್ತಿ ಸಾವು
30/03/2026, 14:48
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಜೀಪೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಜೀಪು ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬರು ಸಾವನಪ್ಪಿರುವ ಘಟನೆ ಮಡಿಕೇರಿ ತಾಲ್ಲೂಕಿನ ಪೇರೂರು ಗ್ರಾಮದಲ್ಲಿ ನಡೆದಿದೆ.




ಬಲ್ಲಮಾವಟಿ ಗ್ರಾಮ ಪಂಚಾಯಿತಿಯ ಪೇರೂರು ಗ್ರಾಮದ ಕಾಫಿ ಬೆಳೆಗಾರ ಶರೀ ಮೇದಪ್ಪ (54) ಮೃತ ವ್ಯಕ್ತಿ. ತಮ್ಮ ಕಾಫಿ ತೋಟದಿಂದ ಕಾರ್ಮಿಕರನ್ನು ಕರೆದುಕೊಂಡು ಮನೆಗೆ ಹಿಂತಿರುಗುತಿದ್ದ ವೇಳೆ ಜೀಪು ಚಾಲನೆ ಮಾಡುತ್ತಿದ್ದ ಶರಿ ಮೇದಪ್ಪರಿಂದ ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ 70 ಅಡಿ ಕೆಳಕ್ಕೆ ಉರುಳಿ ಬಿದ್ದಿದೆ. ಈ ಸಂದರ್ಭ ಜೀಪಿನಿಂದ ಹೊರಕ್ಕೆ ಎಸೆಯಲ್ಪಟ್ಟ ಮೇದಪ್ಪ ಪ್ರಜ್ಞೆ ಕಳೆದುಕೊಂಡಿದ್ದು, ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆ ಸಾವನಪ್ಪಿದ್ದಾರೆ. ಜೀಪು ಸಂಪೂರ್ಣ ಜಖಂ ಗೊಂಡಿದ್ದು, ಕಾರ್ಮಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.












