12:09 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ ವಾಹನಗಳ ಸಂಚಾರ ನಿಷೇಧ

05/07/2025, 21:28

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕರ್ನಾಟಕ ಪೊಲೀಸ್ ಕಾಯ್ದೆ 1963 ರ ವಿಧಿ 31, ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆಕ್ಟ್ 2005 ರ ಕಲಂ 33, ಮೋಟಾರು ವಾಹನಗಳ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಯಗಳು 1989 ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221-ಎ(5) ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ಸ್ಥಳೀಯರ, ವಾಹನ ಸವಾರರ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಜುಲೈ, 6 ರಿಂದ ಆಗಸ್ಟ್ 5 ರವರೆಗೆ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.
*ನಿರ್ಬಂಧಿತ ವಾಹನಗಳು:* ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು. ವಾಹನದ ನೋಂದಣಿ ತೂಕ 18.500 ಕೆ.ಜಿ. ಗಿಂತ ಹೆಚ್ಚಿನ ಸರಕು ಸಾಗಾಣಿ ಮಾಡುವ ಸರಕು ಸಾಗಾಣಿಕೆ ವಾಹನಗಳು. ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು/ ಆರ್ಟಿಕ್ಯೂಲೇಟೆಡ್ ವಾಹನಗಳು.
ನಿರ್ಭಂಧದಿಂದ ವಿನಾಯಿತಿ ನೀಡಿದ ವಾಹನಗಳು: ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು. ಹಾಲು ಪೂರೈಕೆ ವಾಹನಗಳು ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ)
ಈ ಬಗ್ಗೆ ಮೋಟಾರು ವಾಹನ ಕಾಯ್ದೆ 1988 ರ ಸೆಕ್ಷನ್ ರ 116 ರಂತೆ ಅವಶ್ಯವಿರುವ ಸಂಜ್ಞೆ/ ಸೂಚನಾ ಫಲಕಗಳನ್ನು ಅಳವಡಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ, ಇವರಿಗೆ ಅನುಮತಿಸಿದೆ.
ಕೊಡಗು ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275 ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‍ಪೋಸ್ಟ್ ನಿರ್ಮಿಸಿ, ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸಲು, ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ದ ನಿಯಾಮಾನುಸಾರ ಕ್ರಮ ಕೈಗೊಳ್ಳಲು ಆರಕ್ಷಕ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ತಿಳಿಸಿದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಅಧ್ಯಕ್ಷರು ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು