ಇತ್ತೀಚಿನ ಸುದ್ದಿ
ಮಡಿಕೇರಿ- ಕುಶಾಲನಗರ ಹೆದ್ದಾರಿಯಲ್ಲಿ ನಿಯಂತ್ರಣ ಕಳೆದುಕೊಂಡ ಕಾರು: ವಿದ್ಯುತ್ ಕಂಬಕ್ಕೆ ಡಿಕ್ಕಿ; ಕಾರಿನಲ್ಲಿದ್ದವರು ಪಾರು
22/08/2025, 21:58

ಮಡಿಕೇರಿ(reporterkarnataka.com): ಮಡಿಕೇರಿ- ಕುಶಾಲನಗರ ನಡುವಿನ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಹೆದ್ದಾರಿಯ ಬಾಳೆಕಾಡು ಎಸ್ಟೇಟ್ ಬಳಿ ಟೊಯೋಟಾ ಎಟಿಯೋಸ್ ಪ್ರವಾಸಿಗರಿದ್ದ ಕಾರು ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜು ಆಗಿದ್ದು, ಅದೃಷ್ಟವಷಾತ್ ಕಾರಿನಲ್ಲಿ ಇದ್ದವರು ಅಪಾಯದಿಂದ ಪಾರಾಗಿದ್ದಾರೆ.