ಇತ್ತೀಚಿನ ಸುದ್ದಿ
ಮಡಿಕೇರಿ | ತೋಟದಲ್ಲಿ ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ; ಇನ್ನಿಬ್ಬರು ಗಂಭೀರ
29/07/2026, 19:59
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಮಾದಾಪುರ ಸಮೀಪದ ಬಿಳಿಗೇರಿ ಗ್ರಾಮದಲ್ಲಿರುವ ಟಾಟಾ ಕಾಫಿ ತೋಟದಲ್ಲಿ ಇಂದು ಮಧ್ಯಾಹ್ನ ನಡೆದ ಘಟನೆ
ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಮರವೊಂದು ಬಿದ್ದ ಪರಿಣಾಮ ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪರ್ಬಿನಾ ಖಾತುನ್ (29) ಹಾಗೂ ಅಲೆಮನ್ (48) ಮೃತ ದುರ್ದೈವಿಗಳು.
ಈ ಅಪಘಾತದಲ್ಲಿ ಮತ್ತೋರ್ವ ಮಹಿಳೆ ಹಾಗೂ ಓರ್ವ ಪುರುಷ ಕಾರ್ಮಿಕ ತೀವ್ರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.
ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆ ಮಡಿಕೇರಿ ಆಸ್ಪತ್ರೆಗೆ ದಾಖಲು
ಘಟನಾ ಸ್ಥಳಕ್ಕೆ ಸೋಮವಾರಪೇಟೆ ಪೊಲೀಸರು ಹಾಗೂ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.













