ಇತ್ತೀಚಿನ ಸುದ್ದಿ
Madikeri | ವಿರಾಜಪೇಟೆ: ಹೆಂಡತಿ ಜತೆ ಜಗಳವಾಡಿ ಮನೆಬಿಟ್ಟು ತೆರಳಿದ್ದ ವ್ಯಕ್ತಿ ಶವವಾಗಿ ಪತ್ತೆ
06/10/2025, 15:23
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnata@gmail com
ವಿರಾಜಪೇಟೆಯ ಬಾಳುಗೋಡುನಲ್ಲಿ ಹೆಂಡತಿಯೊಂದಿಗೆ ಜಗಳವಾಡಿ ಮನೆಬಿಟ್ಟು ತೆರಳಿದ್ದ ವ್ಯಕ್ತಿಯೊಬ್ಬನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಆರ್ಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳುಗೋಡು ಗ್ರಾಮದ ನಿವಾಸಿ ಪಿ. ಪಿ ಲೋಕೇಶ್ (45) ಮೃತ ವ್ಯಕ್ತಿ. ಬಾಳುಗೋಡು ಗ್ರಾಮದಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಿದ್ದ ಲೋಕೇಶ್ ಸೆ. 29ರಂದು ಕ್ಷುಲ್ಲಕ ಕಾರಣಕ್ಕೆ ಪತ್ನಿ ಯೊಂದಿಗೆ ಜಗಳವಾಡಿದ್ದು ಮನೆ ಬಿಟ್ಟು ಹೋಗಿ ನಾಪತ್ತೆಯಾಗಿದ್ದರು. ಮನೆಯವರು ಹಾಗೂ ಗ್ರಾಮಸ್ಥರು ಎಲ್ಲಡೆ ಹುಡುಕಾಟ ನಡೆಸಿದ್ದು ಪತ್ತೆಯಾಗದ ಹಿನ್ನಲೆಯಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪತ್ನಿ ಲೀಲಾವತಿ ನಾಪತ್ತೆ ಪ್ರಕರಣ ದಾಖಲು ಮಾಡಲಾಗಿತ್ತು. ಭಾನುವಾರ ಸಂಜೆ ಮನೆಯ ಸಮೀಪದ ನಂಜಪ್ಪ ಎಂಬುವವರ ಕಾಫಿ ತೋಟದಲ್ಲಿ ಲೋಕೇಶ್ ಮೃತದೇಹ ಕೊಳೆತು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿದ ಬಳಿಕ ಮೃತದೇಹವನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.














