1:30 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಡಿಕೇರಿಯಲ್ಲಿ ಉಡಗಳ ಮಾರಾಟ ಯತ್ನ:  ಸಿಐಡಿ ಪೊಲೀಸರಿಂದ 3 ಮಂದಿ ಆರೋಪಿಗಳ ಸೆರೆ

26/04/2022, 11:29

ಮಡಿಕೇರಿ(reporterkarnataka.com): ಅಕ್ರಮವಾಗಿ ಉಡಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಡಿಕೇರಿ ಸಿಐಡಿ ಪೊಲೀಸ್‌ ಅರಣ್ಯ ಘಟಕ ಬಂಧಿಸಿದೆ.

ಸತೀಶ್‌, ಹನುಮಂತ ಹಾಗೂ ಶೆಟ್ಟಿ ಬಂಧಿತರು. ಮಡಿಕೇರಿ-ಮೈಸೂರು ರಾಜ್ಯ ಹೆದ್ದಾರಿಯ ಚೈನ್‌ ಗೇಟ್‌ ಬಳಿ 3 ಜೀವಂತ ಉಡಗಳ ಮಾರಾಟಕ್ಕೆ ಯತ್ನಿಸುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ಮಡಿಕೇರಿ ತಾಲೂಕು ಸಿಐಡಿ ಪೊಲೀಸ್‌ ಅರಣ್ಯ ಸಂಚಾರಿ ದಳದ ಸಿಬಂದಿ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಶದಲ್ಲಿದ್ದ ಉಡಗಳನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಿಐಡಿ ಪೊಲೀಸ್‌ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್‌ ಮಹಾನಿರೀಕ್ಷಕ ಕೆ.ವಿ. ಶರತ್‌ಚಂದ್ರ ಅವರ ನಿರ್ದೇಶನದ ಮೇರೆಗೆ, ಮಡಿಕೇರಿ ಸಿಐಡಿ ಪೊಲೀಸ್‌ ಅರಣ್ಯ ಘಟಕದ ಪ್ರಭಾರ ಅಧೀಕ್ಷಕ ಎನ್‌.ಟಿ. ಶ್ರೀನಿವಾಸ್‌ ರೆಡ್ಡಿ ಮಾರ್ಗದರ್ಶನದಲ್ಲಿ ಮಡಿಕೇರಿ ಸಿಐಡಿ ಪೊಲೀಸ್‌ ಅರಣ್ಯ ಸಂಚಾರಿ ದಳದ ಉಪ ನಿರೀಕ್ಷಕಿ ಸಿ.ಯು. ಸವಿ, ಸಿಬಂದಿ ಶೇಖರ್‌, ರಾಜೇಶ್‌, ರಾಘವೇಂದ್ರ, ಯೋಗೇಶ್‌, ಸ್ವಾಮಿ ಮತ್ತು ಮಂಜುನಾಥ್‌ ಅವರು ಕಾರ್ಯಾ ಚರಣೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು