ಇತ್ತೀಚಿನ ಸುದ್ದಿ
ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ: ಮಾಜಿ ಸಿಎಂ ಯಡಿಯೂರಪ್ಪ ಗರಂ
19/08/2022, 01:00
ಬೆಂಗಳೂರು(reporterkarnataka.com): ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಘಟನೆ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಫುಲ್ ಗರಂ ಆಗಿದ್ದಾರೆ.
ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಈ ರೀತಿಯ ಘಟನೆಗಳು ನಡೆಯಬಾರದು. ಸಿದ್ದರಾಮಯ್ಯ ಇರಲಿ, ಯಡಿಯೂರಪ್ಪ ಇರಲಿ, ಅಥವಾ ಮತ್ಯಾರೋ ಇರಬಹುದು. ಇಂತಹ ಘಟನೆಗಳು ನಡೆಯಬಾರದು.
ಸಿದ್ದರಾಮಯ್ಯ ಪ್ರತಿಪಕ್ಷ ನಾಯಕರಾಗಿದ್ದಾರೆ. ಅವರನ್ನು ಗೌರವದಿಂದ ಕಾಣಬೇಕು. ಈ ರೀತಿಯ ನಡವಳಿಕೆಯನ್ನು ಯಾವುದೇ ಕಾರಣಕ್ಕೂ ಸಹಿಸಕೂಡದು, ಯಾರೂ ಈ ರೀತಿ ನಡೆದುಕೊಳ್ಳಬಾರದು ಎಂದು ಮನವಿ ಮಾಡಿದರು.