9:26 AM Thursday8 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಮದಿರಂಗಿ ಮಾಸುವ ಮುನ್ನವೇ ನವ ವಿವಾಹಿತೆ ಆತ್ಮಹತ್ಯೆ: ಒಂದು ತಿಂಗಳ ಹಿಂದೆಯಷ್ಟೇ ಹಸೆಮಣೆ ಏರಿದ್ದ ವಧು!

24/05/2022, 12:04

ಮಡಿಕೇರಿ(reporterkarnataka.com): ಒಂದು ತಿಂಗಳ ಹಿಂದೆಯಷ್ಟೇ ಹಸೆಮಣೆ ಏರಿದ ನವ ವಿವಾಹಿತೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಸಿದ್ದಾಪುರ ಸಮೀಪದ ತೂಬನಕೊಲ್ಲಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಚೈತ್ರಾ(25) ಎಂದು ಗುರುತಿಸಲಾಗಿದೆ. ಈಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಒಂದು ತಿಂಗಳ ಹಿಂದೆ ಹೊದ್ದೂರು ಗ್ರಾಮದ ಯುವಕನೊಂದಿಗೆ ಮದುವೆ ನಡೆದಿತ್ತು. ಕೆಲವು ದಿನಗಳ ಹಿಂದೆ ಯುವತಿ ತೂಬನಕೊಲ್ಲಿಯ ಲೈನ್ ಮನೆಯಲ್ಲಿರುವ ತಾಯಿ ಮನೆಗೆ ಬಂದಿದ್ದು, ಸೋಮವಾರ ಮನೆಯಲ್ಲಿ ಯಾರೂ‌ ಇಲ್ಲದ ಸಮಯದಲ್ಲಿ ಮನೆಯೊಳಗೆ ನೇಣು‌ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ

ಸ್ಥಳಕ್ಕೆ ಸಿದ್ದಾಪುರ ಪೊಲೀಸರು‌ ಭೇಟಿ‌ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ‌ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು