11:39 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮಸ್ಕಿ ತಾಲೂಕಿನ ಹಿರೆದಿನ್ನಿ ಕ್ಯಾಂಪ್ ಸೀಲ್ ಡೌನ್ : 12 ಮಂದಿ ಸೋಂಕಿರನ್ನು ಕೋವಿಡ್ ಕೇರ್ ಸೆಂಟರ್ ಗೆ ವರ್ಗಾವಣೆ 

31/05/2021, 19:39

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಅತಿ ಹೆಚ್ಚು ಕೊರೊನಾ ಸೋಂಕು ಕಾಣಿಸಿಕೊಂಡ ಮಸ್ಕಿ ತಾಲೂಕಿನ ಹಿರೆದಿನ್ನಿ ಕ್ಯಾಂಪ್ ನಿಂದ 

ಕೊರೊನಾ ಸೋಂಕಿತರನ್ನು ಮಸ್ಕಿ ಕೋವಿಡ್ ಸೆಂಟರ್ ಗೆ  ಸಾಗಿಸುವಲ್ಲಿ ತಾಲೂಕು ಆಡಳಿತ ಯಶಸ್ವಿಯಾಗಿದೆ.

ಮಸ್ಕಿ ತಹಶೀಲ್ದಾರ್ ಬಲರಾಮ್ ಕಟ್ಟಿಮನಿ, ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾತೋಡ್, ಪೊಲೀಸ್ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು 12 ಮಂದಿ ಸೋಂಕಿತರು ಮಸ್ಕಿಯ ಕೋವಿಡ್ ಸೆಂಟರ್ ಗೆ ಕಳುಹಿಸಿದ್ದಾರೆ.

ಹಿರೆದಿನ್ನಿ ಕ್ಯಾಂಪನ್ನು ಪೂರ್ತಿ ಸೀಲ್ ಡೌನ್ ಮಾಡಲಾಗಿದೆ. ಯಾರು ಒಳಗಡೆ ಹೋಗುವಂತಿಲ್ಲ ಯಾರು ಹೊರಗಡೆ ಬರುವಂತಿಲ್ಲ. ತಾಲೂಕು ಆಡಳಿತ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿದ್ದಾರೆ. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಸಲಿಂಗಪ್ಪ ಹೊಸಗೌಡರ್, ಕಾರ್ಯದರ್ಶಿ ಶರಣಯ್ಯ ಸ್ವಾಮಿ ತೋಳದಿನ್ನಿ ಸೇರಿದಂತೆ ತಾಲೂಕು ಆಡಳಿತ ನಿಗಾ ವಹಿಸಿದೆ. ಸಾರ್ವಜನಿಕರ ಮನೆಯಲ್ಲಿ ಇರಿ ಹೊರಗಡೆ ಬರಬೇಡಿ. ನಿಮ್ಮ ಜೀವನವನ್ನು ನೀವು ಉಳಿಸಿಕೊಳ್ಳಿ ಎನ್ನುವ ಮಾತುಗಳು ಕೇಳಿ ಬಂದಿದೆ. ಈ ಸಂದರ್ಭದ ಸಂತೋಷ್ ಹಿರೆದಿನ್ನಿ, ಕಂದಾಯ ನಿರೀಕ್ಷಕ ಶರಣಪ್ಪ ಸೇರಿದಂತೆ ಇನ್ನಿತರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು