1:07 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಮದುವೆ ಮನೆಯಿಂದ ಬಾಲಕಿ ಅಪಹರಿಸಿ ಮದುವೆಯಾದ ಮಂಡ್ಯ ಯುವಕನ ಬಂಧನ

06/05/2022, 21:05

ಮೈಸೂರು(reporterkarnataka.com): ಇದೆಲ್ಲ ಸಿನಿಮಾದಲ್ಲಿ ನಡೆದಂತೆ ಘಟಿಸಿದ ಹೋಗಿದೆ. ಮದುವೆ ಮನೆಗೆ ಆಗಮಿಸಿದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ

ಮದುವೆಯಾಗಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಸಂಬಂಧಿಕರ ಮದುವೆಗೆಂದು ತನ್ನ ಪೋಷಕರೊಂದಿಗೆ ಮೈಸೂರಿನ ಗೋಕುಲಂ ಬಡಾವಣೆಯಲ್ಲಿರುವ ಶಿವಮ್ಮಮಹದೇವಪ್ಪ ಕಲ್ಯಾಣ ಮಂಟಪಕ್ಕೆ ಬಂದು ತಂಗಿದ್ದ ಬಾಲಕಿಯನ್ನು ಮಂಡ್ಯ ಜಿಲ್ಲೆಯ ಬೇಲೂರು ಗ್ರಾಮದ ಪ್ರತಾಪ್ ಅಪಹರಿಸಿಕೊಂಡು ಹೋಗಿದ್ದ.

ಗಾಬರಿಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ತಕ್ಷಣವೇ ಕಾರ್ಯಚರಣೆ ನಡೆಸಿದ ಮೈಸೂರಿನ ವಿವಿಪುರಂ ಠಾಣೆಯ ಪೊಲೀಸರು, ತನಿಖೆ ನಡೆಸಿದಾಗ, ಮಂಡ್ಯ ಜಿಲ್ಲೆ ಬೇಲೂರು ಗ್ರಾಮದ ಪ್ರತಾಪ್ ಅಪ್ರಾಪ್ತೆಯನ್ನ ಅಪಹರಿಸಿಕೊಂಡು ಹೋಗಿ ಮಂಡ್ಯದ ಸಬ್ ರಿಜಿಸ್ಟಾರ್ ಕಚೇರಿಯಲ್ಲಿ ಮದುವೆಯಾಗಿರುವುದು ಪತ್ತೆಯಾಯಿತು. ಕೂಡಲೇ ಆತನನ್ನು ಬಂಧಿಸಿದ ಪೊಲೀಸರು, ಅಪಹರಣಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ತೆಗೆದುಕೊಂಡು, ಬಾಲಕಿಯನ್ನು ರಕ್ಷಿಸಿ, ಬಾಲಮಂದಿರದ ವಶಕ್ಕೆ ಆಕೆಯನ್ನು ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು